ಎತ್ತಿನಹೊಳೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

Source: SO News | By Laxmi Tanaya | Published on 8th September 2021, 9:01 AM | State News | Don't Miss |

ಹಾಸನ : ಬಯಲು ಸೀಮೆಗೆ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಎತ್ತಿನಹಳ್ಳ  ಯೋಜನೆ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಲ ಸಂಪನ್ಮೂಲ ಹಾಗೂ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು  ಸೂಚಿಸಿದ್ದಾರೆ.

ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಗ್ಗದ್ದೆ ಬಳಿಯ ಎತ್ತಿನ ಹೊಳೆ   ಮೊದಲ ಹಂತದ ನೀರೆತ್ತುವ ಯೋಜನಾ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಅವರು  ಮಾತನಾಡಿದರು.

ಭೂ ಸ್ವಾಧೀನ ಪ್ರಕ್ರಿಯೆ ಹಾಗೂ  ಅರಣ್ಯ  ಇಲಾಖೆಗೆ ಸೇರಿದ ಜಾಗಕ್ಕೆ  ನಿಯಮಾನುಸಾರ ಅನುಮತಿ  ಪಡೆಯಲು  ವಿಳಂಬವಾಗಿದೆ ಈ ಸಮಸ್ಯೆ ತ್ವರಿತವಾಗಿ ಬಗೆಹರಿಸಬೇಕಿದೆ ಎಂದರು.

ಕೆಲವು  ಜಮೀನಿನ ಮಾಲೀಕರು  ಮಾತ್ರ ಕೋರ್ಟ್‍ಗೆ ಹೋಗಿದ್ದು, ಅಂತಹವರಿಗೆ ಪರಿಹಾರ ಹಣವನ್ನು ನ್ಯಾಯಾಲಯಕ್ಕೆ ಜಮೆ ಮಾಡಿ ತ್ವರಿತಗತಿಯಲ್ಲಿ ಜಮೀನು ಬಿಡಿಸಿಕೊಡಲು ಸೂಚಿಸಲಾಗಿದೆ ಪರಿಹಾರ ನೀಡಲು ಸಾಕಷ್ಟು ಹಣ ಲಭ್ಯವಿದೆ ಎಂದು ತಿಳಿಸಿದರು.

ಕೆಲವು ಪ್ರದೇಶದ ರೈತರು ನ್ಯಾಯಾಲಯಕ್ಕೆ ಹೋಗಿರುವುದರಿಂದ ಆ ಸ್ಥಳಗಳಲ್ಲಿ ಮಾತ್ರ ಕಾಮಗಾರಿ ವಿಳಂಬವಾಗುತ್ತಿದೆ  ಎಂದು ಸಚಿವರು, ಯೋಜನೆಗೆ ವಿದ್ಯುತ್ ಸಂಪರ್ಕ ವ್ಯವಸ್ಥೆ ಸಹ ಪೂರ್ಣಗೊಂಡಿದ್ದು. ಮುಂದಿನ ಒಂದೆರೆಡು ತಿಂಗಳಿನಲ್ಲಿ ಮೊದಲ ಹಂತದ ಕಾಮಗಾರಿ ಮುಕ್ತಾಯಗೊಳಿಸುವಂತೆ  ಅಧಿಕಾರಿಗಳಿಗೆ ಕಟ್ಟುನಿಟ್ಟಿನ  ಸೂಚನೆ ನೀಡಲಾಗಿದೆ ಎಂದರು.

ಈ ವೇಳೆಯಲ್ಲಿ ಶಾಸಕರಾದ  ಕೆ.ಎಂ ಶಿವಲಿಂಗೇಗೌಡ ,ಕೆ.ಎಸ್ ಲಿಂಗೇಶ್ ವಿಧಾನ ಪರಿಷತ್ ಸದಸ್ಯರಾದ  ಎಂ.ಎ  ಗೋಪಾಲಸ್ವಾಮಿ ಹಾಗೂ ಎತ್ತಿನ ಹೊಳೆ ಯೋಜನೆ ಅಧಿಕಾರಿಗಳು ಹಾಜರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...