ಸಾರ್ವಜನಿಕರಿಗೆ ನೀರಿನ ದರ ಹೊರೆಯಾಗದಂತೆ ಕ್ರಮವಹಿಸಲು ಸೂಚನೆ

Source: so news | Published on 13th September 2019, 12:27 AM | State News | Don't Miss |


ಮಂಡ್ಯ: ಮಂಡ್ಯ ನಗರಕ್ಕೆ ಸರಬರಾಜು ಮಾಡುತ್ತಿರುವ ಕುಡಿಯುವ ನೀರಿನ ದರ ಏರಿಕೆಯನ್ನು ಇಳಿಸಲು ನೂತನ ಪ್ರಸ್ತಾವನೆ ಸಲ್ಲಿಸುವಂತೆ ಹಾಗೂ ಸಾರ್ವಜನಿಕರಿಗೆ ನೀರಿನ ದರ ಹೊರೆಯಾಗದಂತೆ ಅಗತ್ಯ ಕ್ರಮವಹಿಸುವಂತೆ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಗರಸಭೆ ಜಲಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಮಂಡ್ಯ ನಗರದ ಕುಡಿಯುವ ನೀರಿನ ದರ ಏರಿಕೆ ಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. 
ಮಂಡ್ಯ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು ಆದಾಯ ಪ್ರಮಾಣ ಕಡಿಮೆ ಇದೆ. ಈ ನಿಟಿನಲ್ಲಿ ನೀರಿನ ದರ ಏರಿಸುವುದು ಸಾರ್ವಜನಕರಿಗೆ ಹೊರೆಯಾಗುತ್ತದೆ. ಈ ನಿಟ್ಟಿನಲ್ಲಿ ನಿರ್ವಹಣಾ ವೆಚ್ಚ ಹೆಚ್ಚಿದ್ದು ಅದನ್ನು ಕಡಿತಗೊಳಿಸಿ ರಾಮನಗರಕ್ಕಿಂತ ಕಡಿಮೆ ದರವನ್ನು ನಿಗದಿಪಡಿಸಿ ಪರಿಷ್ಕೃತ ಪ್ರಾಸ್ತವ ಸಲ್ಲಿಸಲು ಸೂಚಿಸಿದರು.
ಮಂಡ್ಯ ವಿಧಾನ ಸಭೆ ಶಾಸಕರಾದ ಎಂ.ಶ್ರೀನಿವಾಸ್ ಮಾತನಾಡುತ್ತಾ ವಾರಕ್ಕೆ ಎರಡು ಬಾರಿ ನೀರು ಸರಬರಾಜು ಮಾಡಲು ಇಷ್ಟೊಂದು ದುಬಾರಿ ದರ ವಿಧಿಸಿರುವುದು ಸರಿಯಲ್ಲ ಎಂದರು. ಅಂತಿಮವಾಗಿ ಜಿಲ್ಲಾಧಿಕಾರಿಗಳು ವಿದ್ಯುತ್ ಬಿಲ್ಲಿನ 3 ಕೋಟಿ ಹಣವನ್ನು ನಗರಸಭೆ ಪಾವತಿಸುತ್ತಿದ್ದು ಅದನ್ನು ಜಲಮಂಡಳಿ ತನ್ನ ವೆಚ್ಚದಲ್ಲಿ ತೋರಿಸಿಕೊಳ್ಳದಂತೆ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಿದ್ದು ಅದನ್ನು ಕಡಿತಗೊಳಿಸಿ ರಾಮನಗರಕ್ಕಿಂತ ಕಡಿಮೆ ದರವನ್ನು ನಿಗದಿಪಡಿಸಿ ಪರಿಷ್ಕೃತ ಪ್ರಾಸ್ತವ ಸಲ್ಲಿಸಲು ಸೂಚಿಸಿದರು.
ಹಿಂಬಾಕಿಯನ್ನು ವಸೂಲು ಮಾಡದಂತೆ ನಾಗರೀಕ ಸಂಘಟನೆ ಪ್ರತಿನಿಧಿಗಳು ಸಭೆಯಲ್ಲಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು 2018ರ ನಂತರದ ಹಿಂಬಾಕಿಗೆ ಯಾವುದೆ ಬಡ್ಡಿ ವಿಧಿಸದಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಲಮಂಡಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಲಮಂಡಳಿ ಕಾರ್ಯಪಾಲಕ ಅಭಿಯಂತರ ಸಿಎನ್ ಮಹದೇವು. ಸಹಾಯಕ ಕಾರ್ಯಪಾಲಕರಾದ ಶ್ರೀರಂಗರಾಜು ಶಿವಕುಮಾರಸ್ವಾಮಿ ನಗರಸಭೆ ಆಯುಕ್ತರಾದ ಲೋಕೆಶ್ ಯೋಜನಾ ನಿರ್ದೇಶಕರಾದ ನರಸಿಂಹಮೂರ್ತಿ, ಮಾಜಿ ನಗರಸಭಾ ಸದಸ್ಯ ಅನಿಲ್ ಕುಮಾರ್, ನಮ್ಮ ಊರು ನಮ್ಮ ನೀರು ಸಂಘಟನೆಯ ಎಂ.ಬಿ.ನಾಗಣ್ಣ, ಸೀತರಾಮು ಬಿಳಿಯಾ ದೊರೆಸ್ವಾಮಿ ಬೇಲೂರು ಸೋಮಶೇಖರ ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...