ಸಕಾಲ ಅರ್ಜಿ ಆನ್‍ಲೈನ್ ಮೂಲಕ ಭರ್ತಿಗೊಳಿಸಲು ಸೂಚನೆ

Source: so news | Published on 10th September 2019, 12:09 AM | State News | Don't Miss |


ಹಾಸನ: ಸಕಾಲ ಸೇವಾ ಅರ್ಜಿಗಳನ್ನು ಆನ್‍ಲೈನ್ ಮೂಲಕವೇ ಭರ್ತಿಗೊಳಿಸಬೇಕು. ಅರ್ಜಿ ವಿಲೇವಾರಿಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದೆಂದು ಸಕಾಲ ಮಿಷನ್‍ನ ಆಡಳಿತಾಧಿಕಾರಿ ಕೆ.ಮಥಾಯಿ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ತಹಸೀಲ್ದಾರ್‍ಗಳೊಡನೆ ವಿಡೀಯೋ ಸಂವಾದ ನಡೆಸಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಬಾಕಿ ಉಳಿದ ಎಲ್ಲಾ ಸಕಾಲ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಆಯಾ ದಿನಗಳಲ್ಲಿಯೇ ಅರ್ಜಿಗಳನ್ನು ಪರಿಷ್ಕರಿಸಿ ಗಣಕೀಕರಣ ಮಾಡಬೇಕು. ಈ ಸಂಬಂದ ಎಲ್ಲಾ ಇಲಾಖೆಗಳು ಸಕಾಲದ ಸಂಪೂರ್ಣ ಮಾಹಿತಿ ಒಳಗೊಂಡಂತಹ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಬೇಕು ಎಂದು ತಿಳಿಸಿದರು.
ನಿಖರ ಅಥವಾ ಸ್ಪಷ್ಟವಾದ ಕಾರಣಗಳಿಲ್ಲದೆ ಸಕಾಲ ಅರ್ಜಿಗಳನ್ನು ತಿರಸ್ಕರಿಸುವಂತಿಲ್ಲ, ತಿರಸ್ಕರಿಸುವ ಅರ್ಜಿಗಳನ್ನು ಕಡಿಮೆ ಮಾಡಿ ಸೂಕ್ತ ರೀತಿಯಲ್ಲಿ ಸತ್ಯಾಸತ್ಯತೆ ಮಾಹಿತಿಯನ್ನು ಪಡೆದ ನಂತರವೇ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಕೆ.ಮಥಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಾಗರೀಕರಿಂದ ಸ್ವೀಕರಿಸಿದ ಎಲ್ಲಾ ಅರ್ಜಿಗಳಿಗೂ ಸ್ವೀಕೃತಿ ರಶೀದಿ ಕೊಡಬೇಕು ಮತ್ತು ಅರ್ಜಿದಾರರಿಗೆ ಯಾವುದೇ ರೀತಿಯ ಸೇವೆ ವಿಳಂಬ ಸಲ್ಲದು. ಪ್ರತಿ ತಾಲ್ಲೂಕುಗಳಲ್ಲಿಯೂ ತಹಸೀಲ್ದಾರ್ ಹಾಗೂ ಸಂಬಂಧಿಸಿದ ಇಲಾಖಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು ಈ ಸಂಬಂಧ ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಕ್ಷಣ ಜಿಲ್ಲೆಯ ಡಿ.ಎ.ಡಿ.ಸಿ ಗಳ ಗಮನಕ್ಕೆ ತರಬೇಕು ಎಂದು ಅವರು ನಿರ್ದೇಶನ ನೀಡಿದರು.
ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ ಎಚ್.ಎಲ್.ನಾಗರಾಜ್ ಅವರು ಮಾತನನಾಡಿ ಹಾಸನ ಜಿಲ್ಲೆಯು ಪ್ರಸ್ತುತ ರಾಜ್ಯದಲ್ಲಿ ಎಲ್ಲ ಇಲಾಖೆಗಳಲ್ಲಿ 6 ನೇ ರ್ಯಾಂಕ್ ನಲ್ಲಿದೆ. ಕಂದಾಯ ಇಲಾಖೆಯಲ್ಲಿ 3 ನೇ ರ್ಯಾಂಕ್ ನಲ್ಲಿದೆ ಇದನ್ನು 1 ನೇ ರ್ಯಾಂಕ್‍ಗೆ ತರಲು ಎಲ್ಲರೂ ಪ್ರಯತ್ನಿಸಬೇಕು ಹಾಗೂ ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದರು. 
ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯವಾಗಿ ಸಕಾಲದ ನಾಮಫಲಕಗಳನ್ನು ಹಾಕಬೇಕು ಮತ್ತು ಅವುಗಳನ್ನು ಪೋಟೋ ಸಮೇತ ದಾಖಲು ಮಾಡಿ ಜಿಲ್ಲಾಧಿಕಾರಿಗಳಿಗೆ ತಲುಪಿಸಬೇಕು ಎಂದು ಹೇಳಿದರು.
ಸಕಾಲ ಯೋಜನೆಯಲ್ಲಿ ಉತ್ತಮವಾಗಿ ಕೆಲಸ ಮಾಡಿದವರಿಗೆ ಪ್ರಶಂಸಾ ಪತ್ರವನ್ನೂ ನೀಡುವುದಾಗಿ ಕೆಲಸ ಮಾಡದವರಿಗೆ ಶಿಸ್ತು ಕ್ರಮದ ಜೊತೆಗೆ ಪ್ರತೀ ಪ್ರಕರಣಕ್ಕೆ ಪ್ರತಿ ದಿನಕ್ಕೆ ರೂ. 20.- ದಂಡ ವಿಧಿಸಿ ವಸೂಲು ಮಾಡಲಾಗುವುದೆಂದು ತಿಳಿಸಿದರು.
ಸಮರ್ಪಕವಾಗಿ ಸಕಾಲ ಅರ್ಜಿ ವಿಲೇವಾರಿಯಾಗಬೇಕು. ಪ್ರತಿದಿನದ ಮಾಹಿತಿಯನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಈ ಸಂಬಂಧ ಅಧಿಕಾರಿಗಳ ಲೋಪದೋಷ ಕಂಡುಬಂದಲ್ಲಿ ಅವರುಗಳ ಬಗ್ಗೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಶಿರಸ್ತೆದಾರ ರಮೇಶ್ ಮತ್ತಿತರರು ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...