ಕನಿಷ್ಟ ದರದಲ್ಲಿ ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸಲು ಸೂಚನೆ

Source: SO News | By Laxmi Tanaya | Published on 20th April 2021, 8:22 AM | State News | Don't Miss |

ಗದಗ  : ವಾ.ಕ.ರಾ.ರ.ಸಾ.ಸಂಸ್ಥೆಯ  ನಿರ್ವಾಹಕರು ಹಾಗೂ ಚಾಲಕರು ಮತ್ತು ಸಿಬ್ಬಂದಿಗಳು ನೀಡಿದ ಅನಿರ್ದಿಷ್ಟಾವಧಿ ಮುಷ್ಕರದಿಂದ ಸಾರ್ವಜನಿಕರಿಗೆ ಸಂಚರಿಸಲು ತೊಂದರೆಯಾಗುತ್ತಿದೆ. ಕನಿಷ್ಟ ದರದಲ್ಲಿ ಸಾರಿಗೆ ಸೇವೆ ಒದಗಿಸಲು ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಸೂಚಿಸಿದರು.

        ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. ಸಾರ್ವಜನಿಕರ ಸಂಚಾರಕ್ಕೆ ಆದ್ಯತೆ ಮೇರೆಗೆ ಎಲ್ಲ ಮಾರ್ಗಗಳಲ್ಲಿಯೂ ಸಹ ವಾಹನ ಸಂಚರಿಸುವಂತೆ ಹರದಾರಿ ಪರವಾನಿಗೆ ನೀಡುವ ಮೂಲಕ ಸುಗಮ ಸಂಚಾರಕ್ಕೆ ಪ್ರಯತ್ನಿಸುವಂತೆ ತಿಳಿಸಿದರು.

      ವಾಹನಗಳ ಆಸನ ಸಾಮರ್ಥ್ಯಕ್ಕೆ ತಕ್ಕಂತೆ ಸಾರ್ವಜನಿಕರನ್ನು ಕೊಂಡೊಯ್ಯುವಂತೆ ನಿಗಾ ವಹಿಸಭೇಕು. ವಿನಾಕಾರಣ ಗುಂಪುಗೂಡುವುದನ್ನು ತಪ್ಪಿಸುವ ಮೂಲಕ ಸಾಮಾಜಿಕ ಕಾಯ್ದುಕೊಳ್ಳುವಂತೆ ನಿಲ್ದಾಣಗಳಲ್ಲಿ ನೋಡಿಕೊಳ್ಳಬೇಕೆಂದರು.

      ಕೆಲವು ವಾಹನ ಚಾಲಕರು ಹಾಗೂ ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿ ಬಸ್ ಸಂಚಾರ ಆರಂಭಿಸಿದ್ದಾರೆ. ಕರ್ತವ್ಯನಿರತ ನೌಕರರಿಗೆ ಮುಷ್ಕರ ನಿರತ ನೌಕರರು ಹೆದರಿಸುವುದು,ಧಮಕಿ ಹಾಕುವುದು ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸುವುದನ್ನು ಮಾಡದಿರುವಂತೆ ನಿಗಾ ವಹಿಸಬೇಕು.  ಒಂದು ವೇಳೆ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕರ್ತವ್ಯನಿರತ ನೌಕರರಿಗೆ ಸೂಕ್ತ ಬಂದೋಬಸ್ತ್ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.    

       ಶಾಂತಿಯುತ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಅವಕಾಶವಿದ್ದು ನೌಕರರು ಸಂಸ್ಥೆಯ ಆಸ್ತಿ ಹಾಗೂ ಬಸ್‌ಗಳಿಗೆ ಹಾನಿಯುಂಟು ಮಾಡಬಾರದು. ತಪ್ಪಿತಸ್ಥ ನೌಕರರ ಮೇಲೆ ನಿರ್ದಾಕ್ಷಿಣ್ಯ ಕ್ರಮ  ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.  

        ಸಭೆಯಲ್ಲಿ ಸಾರಿಗೆ ಸಂಸ್ಥೆಯ ಗದಗ ವಿಭಾಗದ ಸಂಚಾರಿ ನಿರೀಕ್ಷಕ ಎಂ.ಎA.ಮನ್ಸೂಬ್‌ದಾರ್ ಸಭೆಗೆ ಮಾಹಿತಿ ನೀಡುತ್ತಾ ವಿಭಾಗದಲ್ಲಿ 1847 ನೌಕರರ ಪೈಕಿ 412 ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.  506 ಅನುಸೂಚಿತ ಕಾರ್ಯಾಚರಣೆ ಆಗಮನ ನಿರ್ಗಮನ ಆಗಬೇಕಿತ್ತು.  ಪ್ರತಿದಿನ  386 ನಿರ್ಗಮನಗಳ ಪೈಕಿ 215 ನಿರ್ಗಮನಗಳಾಗಿದ್ದು ಇದರಿಂದ ಶೇ. 56 ರಷ್ಟು ಕಾರ್ಯಾಚರಣೆಯಾದಂತಾಗಿದೆ ಎಂದರು.

      ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳಿ ಮಾತನಾಡಿ ಅಗತ್ಯ ಮಾರ್ಗಗಳಲ್ಲಿ ಸಾರಿಗೆ ವ್ಯವಸ್ಥೆ  ಕಲ್ಪಿಸಲು ಆದ್ಯತೆ ಮೇರೆಗೆ ಕ್ರಮ ವಹಿಸಲಾಗುತ್ತಿದೆ.  ಸಾರಿಗೆ ಸಂಸ್ಥೆಯ ಬಸ್‌ಗಳು ಸಂಚರಿಸದ ಮಾರ್ಗಗಳಲ್ಲಿ ಖಾಸಗಿ ವಾಹನಗಳ ಕಾರ್ಯಾಚರಣೆಗೆ  ವ್ಯವಸ್ಥೆ ಮಾಡಲಾಗಿದೆ ಎಂದರು.    

      ಸಭೆಯಲ್ಲಿ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕ ಬಾಲಚಂದ್ರ ತೊದಲಬಾಗಿ , ಅಧೀಕ್ಷಕ ದಯಾನಂದ ತಿಳುವಳ್ಳಿ ಇದ್ದರು.   

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...