ರೈತರ ಖಾತೆಗೆ ತ್ವರಿತವಾಗಿ ಹಣ ವರ್ಗಾವಣೆ ಮಾಡುವಂತೆ ಸೂಚನೆ

Source: SO News | By Laxmi Tanaya | Published on 8th September 2021, 8:31 AM | State News | Don't Miss |

ಹಾಸನ : ಸರ್ಕಾರದಿಂದ ಎತ್ತಿನಹೊಳೆ ಯೋಜನೆ ಭೂ ಸ್ವಾಧೀನಕ್ಕಾಗಿ ಬಿಡುಗಡೆಯಾಗಿರುವ ಹಣವನ್ನು ತ್ವರಿತವಾಗಿ ರೈತರ ಖಾತೆಗೆ ವರ್ಗಾವಣೆ ಮಾಡುವಂತೆ ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ರೈತರ ಜಮೀನಿನ ನೇರ ಖರೀದಿಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಶೀಘ್ರವಾಗಿ ಖರೀದಿ ಕಾರ್ಯ ಪೂರ್ಣಗೊಳಿಸುವಂತೆ ಸೂಚಿಸಿದರು.  

ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಅವಾರ್ಡ್ ಪಾಸಾದ ತಕ್ಷಣ ಹಣವನ್ನು ಕೋರ್ಟಲ್ಲಿ   ಠೇವಣಿ ಮಾಡಬೇಕು ಇದರಿಂದ ಜಮೀನನ್ನು ಪಡೆದು ಕೆಲಸ ನಿರ್ವಹಿಸಲು ಅನುಕೂಲವಾಗುತ್ತದೆ ಎಂದರು.

ಭೂಸ್ವಾಧೀನ ವಿಳಂಬವಾದರೆ ಅದಕ್ಕೆ ಕಂದಾಯ ಮತ್ತು ನೀರಾವರಿ  ಇಲಾಖೆಯ ಮುಖ್ಯ ಇಂಜಿನಿಯರ್, ಸೂಪರಿಡೆಂಟ್ ಇಂಜಿನಿಯರ್ ಹಾಗೂ ಕಾರ್ಯಪಾಲಕ ಅಭಿಯಂತರರು ನೇರ ಹೊಣೆಗಾರರಾಗಲಿದ್ದಾರೆ ಎಂದು ತಿಳಿಸಿದರು.   

ಎತ್ತಿನ ಹೊಳೆ ಕಾರ್ಯ ಪೂರ್ಣವಾಗುವವರೆಗೆ ಪ್ರತಿ ಹಂತದಲ್ಲಿಯೂ ಪತ್ರ ವ್ಯವಹಾರ ನಡೆಸಬೇಕು ಎಂದ ಅವರು ಜಮೀನುಗಳು ಒತ್ತುವರಿಯಾಗಿದ್ದರೆ ತೆರವುಗೊಳಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.   

ಅಭಿವೃದ್ದಿ ಯೋಜನೆಗೆ  ಪಡೆದುಕೊಂಡಿರುವ ಭೂಮಿಯನ್ನು ರೈತರ ಖಾತೆಯಿಂದ ಕಡಿತಗೊಳಿಸಿ ಆರ್.ಟಿ.ಸಿ ಯಲ್ಲಿ ಬದಲಾವಣೆಗೆ ಸಂಬಂಧಪಟ್ಟ ಇಲಾಖೆ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.

ನೀರಾವರಿ ಯೋಜನೆಗಳಿಂದ ದೇಶದ ಶ್ರೀಮಂತಿಕೆ  ಹೆಚ್ಚಾಗುವುದರ  ಜೊತೆಗೆ ರೈತರ ಬದುಕು ಹಸನಾಗುತ್ತದೆ ಎಂದು ಅವರು ಹೇಳಿದರು. 
ಈಗಾಗಲೇ ಶೇ 80 ರಿಂದ 90 ರಷ್ಟು ಕೆಲಸವಾಗಿರುವ  ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು ಎಂದರು. 

ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಮಾತನಾಡಿ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅವಾರ್ಡ್ ಪಾಸಾದ ತಕ್ಷಣ ರೈತರಿಗೆ ನೊಟೀಸ್ ನೀಡಿ ಹಣ ಪಾವತಿಗೆ ಕ್ರಮ ವಹಿಸಲಾಗುವುದು ಎಂದರು. 

ಸಭೆಯಲ್ಲಿ ಶಾಸಕರಾದ ಕೆ.ಎಂ ಶಿವಲಿಂಗೇಗೌಡ, ಪ್ರೀತಂ ಜೆ ಗೌಡ, ವಿಧಾನ ಪರಿಷತ್ ಸದಸ್ಯರಾದ  ಎಂ.ಎ ಗೋಪಾಲಸ್ವಾಮಿ, ನೀರಾವರಿ ಇಲಾಖೆ ಕಾರ್ಯದರ್ಶಿ ಲಕ್ಷ್ಮಣ್‍ರಾವ್ ಪೇಶ್ವೆ, ನೀರಾವರಿ ಇಲಾಖೆ ಮುಖ್ಯ ಅಭಿಯಂತರರಾದ ಮಾದವ, ವಿಶೇಷ ಭೂ ಸ್ವಾಧೀನಾಧಿಕಾರಿ ಕಲ್ಪಶ್ರಿ, ಎತ್ತಿನ ಹೊಳೆ ಯೋಜನೆ ಕಾರ್ಯಪಾಲಕ ಅಭಿಯಂತರರಾದ ಆನಂದ್ ಹಾಗೂ ಮತ್ತಿತರರು ಹಾಜರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...