ಎಟಿಎಂನಿಂದ ಹಣ ಡ್ರಾ ಮಾಡುತ್ತಿದ್ದ ಅಂತರಾಜ್ಯ ಆಸಾಮಿ ಬಂಧನ. ಯಲ್ಲಾಪುರ ಪೊಲೀಸರಿಂದ ಬಂಧನ.

Source: SO News | By Laxmi Tanaya | Published on 5th November 2020, 6:52 AM | State News |

ಯಲ್ಲಾಪುರ : ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ ಎಟಿಎಂ ನಿಂದ ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನೋರ್ವನನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವೇಣುಗೋಪಾಲ ಕೃಷ್ಣ ರೆಡ್ಡಿ ಬಂಧಿತನಾಗಿದ್ದಾನೆ.

2019 ರ ಡಿಸೆಂಬರ್ ನಲ್ಲಿ ಯಲ್ಲಾಪುರದ ವ್ಯಕ್ತಿಯೋರ್ವರಿಗೆ ಎಟಿಎಂನಲ್ಲಿ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಅವರಿಂದ ಕಾರ್ಡ್ ಪಡೆದು, ಅದನ್ನು ಬದಲಿಸಿ ಬೇರೆ ಕಾರ್ಡನ್ನು  ನೀಡಿ ಯಾಮಾರಿಸಿದ್ದ. ನಂತರ ತಾನು ಪಡೆದುಕೊಂಡ ಕಾರ್ಡ್ ಬಳಸಿ ನಾಲ್ವತ್ತು ಸಾವಿರ ರೂ ಹಣ ಡ್ರಾ ಮಾಡಿದ ಬಗ್ಗೆ  ಪ್ರಕರಣ ದಾಖಲಾಗಿತ್ತು.

ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 18,880 ರೂ ನಗದು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಈತ ಗೌರಿಬಿದನೂರು, ಮಧುಗಿರಿ, ಬಾಗೇಪಲ್ಲಿ, ಮಡಿವಾಳ, ಆಂಧ್ರಪ್ರದೇಶದ ಚಿತ್ತೂರುಗಳಲ್ಲಿಯೂ ಈತನ ವಿರುದ್ಧ ಇದೇ ಮಾದರಿಯ ಪ್ರಕರಣಗಳು ದಾಖಲಾಗಿವೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...