ಅಹಮದಾಬಾದ್: ಅಂತರ್‌ರಾಷ್ಟ್ರೀಯ ವಿಮಾನಯಾನ ನಿರ್ಬಂಧ ಜುಲೈ 31ರವರೆಗೆ ವಿಸ್ತರಣೆ

Source: VB | By S O News | Published on 1st July 2021, 8:07 PM | National News |

ಅಹಮದಾಬಾದ್: ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಂತರ್‌ರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಸಂಚಾರದ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನ ಯಾನ ಮಹಾನಿರ್ದೇಶನಾಲಯ (ಡಿಜಿಸಿಎ)  ಹೇಳಿದೆ.

ಆದರೆ, ನಿರ್ದಿಷ್ಟ ಪ್ರಕರಣದಲ್ಲಿ ಆಯ್ದ ಮಾರ್ಗಗಳಲ್ಲಿ ನಿಗದಿತ ಅಂತರ್‌ರಾಷ್ಟ್ರೀಯ ವಿಮಾನ ಯಾನಕ್ಕೆ ಅನುಮತಿ ನೀಡಲಾಗುವುದು ಎಂದು ಡಿಜಿಸಿಎ ತಿಳಿಸಿದೆ. ಹಾರಾಟ ನಿಷೇಧ ಅನುಮತಿ ಪಡೆದ ಸರಕು ಸಾಗಾಟ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅದು ಹೇಳಿದೆ.

ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಭಾರತದಲ್ಲಿ ಅಂತರ್‌ರಾಷ್ಟ್ರೀಯ ವಿಮಾನಗಳ ಸೇವೆಯ ಮೇಲೆ 2020 ಮಾರ್ಚ್ 23ರಂದು ನಿರ್ಬಂಧ ವಿಧಿಸಲಾಗಿತ್ತು. ಆದರೆ, 'ವಂದೇ ಭಾರತ್ ಮಿಷನ್' ಅಡಿಯಲ್ಲಿ 2020 ಮೇಯಿಂದ ಹಾಗೂ 'ಏರ್ ಬಬಲ್' ವ್ಯವಸ್ಥೆ ಅಡಿಯಲ್ಲಿ ನಿಗದಿತ ರಾಷ್ಟ್ರಗಳಿಂದ 2020ರ ಜುಲೈನಿಂದ ವಿಶೇಷ ಅಂತರ್‌ ರಾಷ್ಟ್ರೀಯ ವಿಮಾನಗಳ ಸೇವೆ ಆರಂಭಿಸಲಾಗಿತ್ತು.

ಅಮೆರಿಕ, ಬ್ರಿಟನ್, ಯುಎಇ, ಕಿನ್ಯಾ, ಭೂತಾನ್ ಹಾಗೂ ಫ್ರಾನ್ಸ್ ಸೇರಿದಂತೆ ಸುಮಾರು 24 ದೇಶಗಳೊಂದಿಗೆ ಭಾರತ 'ಏರ್ ಬಬಲ್” ಒಪ್ಪಂದ ಮಾಡಿಕೊಂಡಿತ್ತು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...