ಹುಬ್ಬಳ್ಳಿ ನಗರದಲ್ಲಿ ಪ್ರತಿಷ್ಠಿತ ಕಂಪನಿಗಳಿಂದ‌ 6 ಸಾವಿರ ಕೋಟಿ ಬಂಡವಾಳ ಹೂಡಿಕೆ : ಸಚಿವ ಜಗದೀಶ್ ಶೆಟ್ಟರ್

Source: SO News | By Laxmi Tanaya | Published on 24th November 2020, 10:25 PM | State News | Don't Miss |

ಹುಬ್ಬಳ್ಳಿ :  ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಮಹಾನಗರ ಪಾಲಿಕೆ ಅನುದಾನದಲ್ಲಿ ಉದಯನಗರದ ಶಿವ ಗಣೇಶ ದೇವಸ್ಥಾನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಭಾ ಭವನ ಉದ್ಘಾಟಿಸಿ ಅವರು ಮಾತನಾಡಿದರು.

ಬಂಡವಾಳ ಹೂಡಿಕೆಯಿಂದ ಐ.ಟಿ. ಮೆಕಾನಿಕಲ್ ಇಂಜಿನಿಯರಿಂಗ್, ಎಫ್.ಎಂ.ಜಿ.ಸಿ ಸೇರಿಯ ಹಲವು ವಿಭಾಗಗಳಲ್ಲಿ ಉದ್ಯೋಗ ಅವಕಾಶಗಳು ಸೃಷ್ಠಿಯಾಗಲಿವೆ. ಜಿಲ್ಲೆಯ 20 ರಿಂದ 30 ಸಾವಿರ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ದೊರಕಲಿದೆ. ಯುವಜನತೆ ಉದ್ಯೋಗ ಅರಿಸಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವುದು ತಪ್ಪಲಿದೆ ಎಂದರು. 

ಅವಳಿ ನಗರದಲ್ಲಿ ನಗರ ವಿಕಾಸ, ಸ್ಮಾರ್ಟ್ ಸಿಟಿ. ಲೋಕೋಪಯೋಗಿ ಸೇರಿದಂತೆ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಅವಳಿ ನಗರವನ್ನು ಸುಂದರ ಹಾಗೂ ಸುಸ್ಥಿರ ನಗರವನ್ನಾಗಿ ಮಾರ್ಪಡಿಸಲಾಗುವುದು. ನಗರದ ಪ್ರತಿಯೊಂದು ಬಡಾವಣೆಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಹುಬ್ಬಳ್ಳಿ ಧಾರವಾಡ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...