ಕಾರವಾರ:ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಅತ್ಯುತ್ತಮ ಕೃತಿಗಳಿಗೆ ಕೊಡಮಾಡುವ 2018ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳು/ ಕೃತಿಗಳಿಗೆ ಆಹ್ವಾನಿಸಲಾಗಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2018ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಆಯ್ಕೆ ಮಾಡಲಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2018ರ ಜನೆವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಕೃತಿಯ ತಾಂತ್ರಿಕ ಪುಟದಲ್ಲಿ "ಪ್ರಥಮ ಮುದ್ರಣ 2018" ಎಂದು ಮುದ್ರಿತವಾಗಿರಬೇಕು.
ಕೃತಿಗಳ ವಿವರ;
2018ರ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದ್ದು, ಅವುಗಳ ವಿವರ ಇಂತಿದೆ. ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ನವಕವಿಗಳ ಪ್ರಥಮ ಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ – 30 ವರ್ಷ ಒಳಗಿರುವ ಯುವ ಕವಿಗಳು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತಪ್ರತಿಯನ್ನು ಕಳಿಸಿಕೊಡಬೇಕು. ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ (ಸಾಹಿತ್ಯಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ), ಮಾನವಿಕ (ಜಾನಪದ, ಇತಿಹಾಸ, ರಾಜಕೀಯ ಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹ ಸಂವಹನ, ಧಾರ್ಮಿಕ, ದಾರ್ಶನಿಕ), ಸಂಶೋಧನೆ (ಕನ್ನಡ ಭಾಷೆ ಮತ್ತು ಸಂಸ್ಕøತಿಗಳಿಗೆ ಸಂಬಂಧಿಸಿದ ಸಂಶೋಧನೆ), ವೈಚಾರಿಕ/ ಅಂಕಣ ಬರಹ, ಅನುವಾದ- ಸೃಜನ- (ಕಾದಂಬರಿ, ಕಾವ್ಯ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ), ಸೃಜನೇತರ- (ಶಾಸ್ತ್ರಸಾಹಿತ್ಯ, ಸಾಹಿತ್ಯ ವಿಮರ್ಶೆ). ಅನುವಾದ-2 (ಸೃಜನ/ ಸೃಜನೇತರ) ಕನ್ನಡದಿಂದ ಅನ್ಯಭಾಷೆಗೆ ಅನುವಾದಗೊಂಡ ಕೃತಿ, ಲೇಖಕರ ಮೊದಲ ಸ್ವತಂತ್ರ ಕೃತಿಗೆ ಬಹುಮಾನ- 2018ರಲ್ಲಿ ಪ್ರಕಟವಾದ ಹೊಸ ಬರಹಗಾರರ ಮೊದಲ ಸ್ವತಂತ್ರ ಕೃತಿಯೆಂದು ಖಾತರಿಪಡಿಸುವ ದೃಢೀಕರಣ ಪತ್ರ ಲಗತ್ತಿಸಬೇಕು. ಕನ್ನಡದಿಂದ ಇಂಗ್ಲೀಷಿಗೆ ಅನುವಾದ.
2018ರ ಪುಸ್ತಕ ಬಹುಮಾನಕ್ಕಾಗಿ ಮರುಮುದ್ರಣವಾದ ಪುಸ್ತಕಗಳು, ಪಿಹೆಚ್ಡಿ ಪದವಿಗಾಗಿ ಸಿದ್ದಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕøತ ಸಾಹಿತಿಗಳ ಕೃತಿಗಳು, ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು, ಒಂದೇ ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಮತ್ತದೇ ಪ್ರಕಾರದಲ್ಲಿ ಪರಿಗಣಿಸಲಾಗುವುದಿಲ್ಲ. ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ-ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನಕ್ಕಾಗಿ ಕಳುಹಿಸುವ ಪುಸ್ತಕಗಳು ನಿಗದಿತ ಅವಧಿಯಲ್ಲಿ ಪ್ರಕಟವಾಗಿರಬೇಕು. ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆಸಿ ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟರ್ಡ್ ಅಂಚೆ/ ಕೋರಿಯರ್ ಮೂಲಕ ಅಥವಾ ಖುದ್ದಾಗಿ ಜುಲೈ. 10 ರೊಳಗಾಗಿ ತಲುಪಿಸಬೇಕು. ಕಳುಹಿಸಲ್ಪಡುವ ಕೃತಿಯ ಮೇಲೆ ಯಾವ ಸಾಹಿತ್ಯದ ಪ್ರಕಾರಕ್ಕೆ ಸೇರಿರುತ್ತದೆ ಎಂದು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆಯಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read These Next
ಕಾರವಾರ: ಜಿಲ್ಲೆಯಲ್ಲಿ ಬುಧವಾರ 7 ನಾಮಪತ್ರ ಸಲ್ಲಿಕೆ
12 ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಬುಧವಾರ ಜಿಲ್ಲೆಯಲ್ಲಿ ...
ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ
ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...
ದುಬೈಯಲ್ಲಿ ಮಹಾಮಳೆ; 18ಕ್ಕೂ ಹೆಚ್ಚು ಮಂದಿ ಸಾವು; ಜಲಾವೃತ್ತಗೊಂಡ ವಿಮಾಣ ನಿಲ್ದಾಣ
ದುಬೈ: ಸಾಮಾನ್ಯವಾಗಿ ವರ್ಷದ ಈ ಸಮಯದಲ್ಲಿ ಬಿಸಿಲ ಬೇಗೆಯಿರುತ್ತಿದ್ದ ಸಂಯುಕ್ತ ಅರಬ್ ಸಂಸ್ಥಾನವು ಮಂಗಳವಾರ ಸುರಿದ ಭಾರೀ ಮಳೆಗೆ ...
ಉರಿ ಬಿಸಿಲಲ್ಲೂ ಭರ್ಜರಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ ಡಾ.ಅಂಜಲಿ ನಿಂಬಾಳ್ಕರ್
ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದ ಹಿರಿಯರು, ...
ಗ್ಯಾರಂಟಿ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಹಿಂದೆ ಬಿದ್ದಿದ್ದಾರೆ: ಆರ್ ವಿ ದೇಶಪಾಂಡೆ
ಕಾರವಾರ: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ...
ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ
12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ...
ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ
12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ...
ನೀರಿನ ಪೈಪ್ ಲೈನ್ ಹಾಳಾಗಿ ಚರಂಡಿ ಸೇರಿದ ಸಾವಿರಾರು ಲೀಟರ್ ಕುಡಿಯುವ ನೀರು
ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಡಿಯುವ ನೀರಿನ ಪೈಪ್ನಲ್ಲಿ ...
ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಮೂರು ನಾಮಪತ್ರ ಸಲ್ಲಿಕೆ
ಕಾರವಾರ : 12-ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಇಂದು ಒಟ್ಟು ಮೂರು ...
ಕಾರವಾರ ಯುವತಿ ಕಾಣೆ. ಪತ್ತೆಗಾಗಿ ಮನವಿ.
ಸುನೀತಾ ಕಿರಣ ಲಮಾಣಿ(20ವರ್ಷ), ಸಾ: ಲಕ್ಷಮೇಶ್ವರ, ಅಕ್ಕಿಗುಂದಿ, ಗದಗ. ಹಾಲಿ ಸೀಬರ್ಡ್ ಕಾಲೋನಿ, ಚಿತ್ತಾಕುಲ ಕಾರವಾರ ಇವರು ದಿನಾಂಕ:10-04-2024 ...
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...
ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ
ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ