ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Source: so news | By Manju Naik | Published on 17th June 2019, 5:59 PM | Coastal News | Don't Miss |

ಕಾರವಾರ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2019-20ನೇ ಸಾಲಿಗೆ ಕರ್ನಾಟಕ ಮೂಲನಿವಾಸಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯ ವೇತನ ಹಾಗೂ ಕರ್ನಾಟಕದ ಪಿಂಚಣಿ ಇಲ್ಲದ ಹಾಗೂ ರಾಜ್ಯದಲ್ಲಿ ಈಗ ನೆಲೆಸಿರುವ ಹೊರರಾಜ್ಯಗಳ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಅರ್ಜಿ ಆಹ್ವಾನಿಸಿದೆ.
 ಉತ್ತರ ಕನ್ನಡ ಜಿಲ್ಲೆಯಲ್ಲಿನ ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳು,  ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಾರವಾರ ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು.  ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಅಗಷ್ಟ 31  ಕೊನೆಯ ದಿನವಾಗಿದೆ. 
ಹೆಚ್ಚಿನ ಮಾಹಿತಿಯನ್ನು  ಉಪನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಾರವಾರ ದೂರವಾಣಿ ಸಂ: 08382-226538 ಇವರನ್ನು ಸಂಪರ್ಕಿಸಿ ಪಡೆಯಬಹುದು. 

Read These Next