ಕಾರವಾರ: ಪುಸ್ತಕ ಬಹುಮಾನ ಆಯ್ಕೆಗೆ ಅರ್ಜಿ ಆಹ್ವಾನ

Source: S.O. News service | By S O News | Published on 23rd January 2021, 9:12 PM | Coastal News |

ಕಾರವಾರ: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2020ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ:01.01.2020 ರಿಂದ 31.12.2020ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೂಡಲಪಾಯ ಹಾಗೂ ಪಡುವಲಪಾಯ ಕರಾವಳಿ ಯಕ್ಷಗಾನ ಈ ಎರಡು ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಸಲ್ಲಿಸಬಹುದಾಗಿರುತ್ತದೆ.

ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ

ಮುದ್ರಣ ಆವೃತ್ತಿಯಾಗಿರಬೇಕು. ಆಯ್ಕೆಯಾದ ಪುಸ್ತಕಕ್ಕೆ ರೂ.25,000 ಗಳ ಬಹುಮಾನವನ್ನು ನೀಡಲಾಗುವುದು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಬೆಳಗ್ಗೆ 10.30 ರಿಂದ ಸಂಜೆ 5.00ರವರೆಗೆ ಅರ್ಜಿಗಳನ್ನು ಪಡೆಯಬಹುದಾಗಿದೆ.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-560002, ಇವರಿಗೆ 2021ರ ಫೆಬ್ರವರಿ 10ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳನ್ನು ಅಕಾಡೆಮಿಯ ವೆಬ್‍ಸೈಟ್ http://10.10.30.41:81/karnatakayakshaganaacademy.karnataka.gov.in/public ನಲ್ಲಿ ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ ದೂ:080-22113146 ಪಡೆಯಬಹುದಾಗಿದೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...