ಮಹಿಳಾ ಬೀದಿ ಬದಿ ವ್ಯಾಪಾರಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Source: S.O. News Service | Published on 6th August 2019, 7:53 PM | Coastal News | Don't Miss |

ಮಂಗಳೂರು :2019-20ನೇ ಸಾಲಿನ ಸಮೃದ್ಧಿ ಯೋಜನೆಯಡಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ   18 ರಿಂದ 60 ವಯೋಮಿತಿಯ ಬೀದಿ ಬದಿ ಮಹಿಳಾ ವ್ಯಾಪಾರಿಗಳಿಗೆ ತಲಾ ರೂ.10,000 ಗಳಂತೆ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರೋತ್ಸಾಹಧನ ನೀಡಲಾಗುತ್ತದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಮಹಿಳೆಯರು ಕಡ್ಡಾಯವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ “ಬೀದಿ ಬದಿ ವ್ಯಾಪಾರಿ” ಎಂದು ಗುರುತಿಸಿದ ದೃಡೀಕರಣವನ್ನು, ಗುರುತಿನ ಚೀಟಿ, ಬಿ.ಪಿ.ಎಲ್ ಕಾರ್ಡ್, ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಕಡ್ಡಾಯವಾಗಿ ಖಾತೆ ಹೊಂದಿದ್ದು (ಆಧಾರ್ ಗುರುತು ಚೀಟಿಯನ್ನು ಬ್ಯಾಂಕ್ ಖಾತೆಗೆ ಜೋಡಣೆ) ಮಾಡಿರಬೇಕು ಹಾಗೂ ಬೀದಿ ಬದಿ ವ್ಯಾಪಾರ ಮಾಡುತ್ತಿರುವ ಸ್ಥಳದ ಭಾವಚಿತ್ರಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಂಗಳೂರು ಗ್ರಾಮಾಂತರ ವಾಮಂಜೂರು, ಮೂಡುಶೆಡ್ಡೆ-575028 ದೂ.0824-2263199 ಇಲ್ಲಿಂದ  ಪಡೆದು ಆಗಸ್ಟ್ 31 ರೊಳಗಾಗಿ ಸಲ್ಲಿಸಬಹುದಾಗಿದೆ. ಈಗಾಗಲೇ ಯೋಜನೆಯ ಸವಲತ್ತು ಪಡೆದುಕೊಂಡ ಫಲಾನುಭವಿಗಳಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲವೆಂದು ಶಿಶು ಅಭಿವೃದ್ಧಿ ಯೋಜನೆ ಮಂಗಳೂರು(ಗ್ರಾಮಾಂತರ ಇವರ ಪ್ರಕಟಣೆ ತಿಳಿಸಿದೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...