ಅಸಂಘಟಿತ ವರ್ಗಗಳ ಕಾರ್ಮಿಕರಿಂದ ಪರಿಹಾರ ಧನಕ್ಕಾಗಿ ಅರ್ಜಿ ಆಹ್ವಾನ

Source: SO News | By Laxmi Tanaya | Published on 15th June 2021, 10:56 PM | Coastal News | Don't Miss |

ಕಾರವಾರ : ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ವರ್ಗಗಳ ಕಾರ್ಮಿಕರಿಂದ ಪರಿಹಾರ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಆರ್.ಪಿ. ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಪ್ರಸ್ತುತ 43 ವಲಯಗಳ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರೆಂದು ಗುರುತಿಸಿದ್ದು, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಮಂಡಳಿಯು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿ 11 ಅಸಂಘಟಿತ ವಲಯಗಳಾದ ಹಮಾಲರು, ಚಿಂದಿ ಆಯುವವರು, ಗೃಹ ಕಾರ್ಮಿಕರು, ಟೈಲರ್‍ಗಳು, ಮೆಕ್ಯಾನಿಕ್ ಹಾಗೂ ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಮತ್ತು ಬಟ್ಟಿ ಕಾರ್ಮಿಕರು ಸರ್ಕಾರದಿಂದ ಒಂದು ಬಾರಿ ನೀಡುವ 2000 ರೂ ಪರಿಹಾರ ಧನಕ್ಕಾಗಿ ಏಕ ಶೀರ್ಷಿಕೆ ಮತ್ತು ಏಕ ಚಿಹ್ನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಕರ್ನಾಟಕ ರಾಜ್ಯದ ನಿವಾಸಿಗಳಾದ 18 ರಿಂದ 60 ವರ್ಷದೊಳಗಿನ ಆಸಕ್ತರು ಅರ್ಜಿ ಹಾಕಬಹುದು.

ಕಾರ್ಮಿಕ ಇಲಾಖೆ ಅಥವಾ ನಗರಸಭೆಯಿಂದ ಅರ್ಜಿ ಪಡೆದುಕೊಳ್ಳಬಹುದು. 
ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ನಕಲು ಪ್ರತಿ, ಬಿಪಿಎಲ್ ಕಾರ್ಡ್( ಇರುವರು ಮಾತ್ರ) ದಾಖಲೆಗಳೊಂದಿಗೆ ಜುಲೈ 20 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-227900ಗೆ ಸಂಪರ್ಕಿಸಬಹುದು ಎಂದಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...