ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ

Source: sonews | By Staff Correspondent | Published on 15th July 2019, 6:40 PM | Coastal News |

ಕಾರವಾರ: 2019ನೇ ಸಾಲಿನಲ್ಲಿ ಪ್ರಥಮವಾಗಿ ಮುದ್ರಣವಾಗಿರುವ ಪುಸ್ತಕಗಳನ್ನು ಗ್ರಂಥಾಲಯ ಇಲಾಖೆ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
    
2019ನೇ ಸಾಲಿನಲ್ಲಿ 1 ಜನವರಿ 2019 ರಿಂದ 30 ಜೂನ್ 2019 ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ ಉದ್ಯಾನವನ, ಬೆಂಗಳೂರು ಇಲ್ಲಿ  ಜುಲೈ 30ರ ಒಳಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿ ಇರಿಸಿ (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ. ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ: ಅಂಬೇಡ್ಕರ್ ವೀಧಿ, ಬೆಂಗಳೂರು 560001 ಇಲ್ಲಿಗೆ 31 ಜುಲೈ 2019ರ ಸಂಜೆ 5-30ರ ಒಳಗೆ ಸಲ್ಲಿಸುವುದು. ತದನಂತರ ಬಂದ ಯಾವುದೇ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ.

ನಿಗದಿತ ಅರ್ಜಿ ನಮೂನೆ ಮತ್ತು ನಿಬಂಧನೆಗಳನ್ನು ಇಲಾಖಾ ಅಂತರ್ಜಾಲ www.karnatakapubliclibrary.gov.in    ಹಾಗೂ ರಾಜ್ಯದ ಎಲ್ಲಾ ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು ಅಥವಾ ಮುಖ್ಯಗ್ರಂಥಾಲಯಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ 080-22864990. 22867358 ಸಂಪರ್ಕಿಸಲು ಸಾರ್ವಜನಿಕ ಗ್ರಂಥಾಲಯ ಇಲಾಖೆ, ಬೆಂಗಳೂರು ಇವರ ಪ್ರಕಟಣೆ ತಿಳಿಸಿದೆ.

Read These Next