ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು   ಅರ್ಜಿ ಆಹ್ವಾನ      

Source: sonews | By Staff Correspondent | Published on 13th August 2020, 3:40 PM | Coastal News |

ಕಾರವಾರ: ಡಾ: ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಬಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆಅಲೆಮಾರಿ ಅಭಿವೃದ್ದಿ  ನಿಗಮದಿಂದ 2020-21ನೇ ಸಾಲಿನಲ್ಲಿ ನಿಗಮವು ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ (ಪ್ರೇರಣಾ) ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆ ಹಾಗೂ ಭೂ ಒಡೆತನ ಯೋಜನೆ ಕಾರ್ಯಕ್ರಮಗಳಡಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸಾಲ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಡಾ: ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ http://adcl.karnataka.gov.in ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, https://kmvstdcl.karnataka.gov.in ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, http://adijambaava.karnataka.gov.in, ಕರ್ನಾಟಕ ತಾಂಡಾ ಅಬಿವೃದ್ಧಿ ನಿಗಮ http://banjarathanda.kar.nic.in ಈ ಆನ್‍ಲೈನ್ ವಿಳಾಸಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಭೋವಿ ಸಮುದಾಯದವರು ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಕಛೇರಿಗೆ ಸಲ್ಲಿಸಬೇಕು.  ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ/ಅರೆಅಲೆಮಾರಿ ಅಭಿವೃದ್ದಿ ನಿಗಮದ ಸಮುದಾಯದವರು ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಕಛೇರಿಗೆ ಸಲ್ಲಿಸಬೇಕು. 

ಈ ಮೆಲ್ಕಂಡ ನಿಗಮದ ವತಿಯಿಂದ 2020-21ನೇ ಸಾಲಿನ ಸ್ವಯಂ ಉದ್ಯೋಗ ಯೋಜನೆ (ಘಟಕ ವೆಚ್ಚ ರೂ 50000/-), ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ (ಗರಿಷ್ಟ ರೂ 1.00 ಲಕ್ಷ ಸಹಾಯಧನ ಉಳಿದ ಮೊತ್ತ ಬ್ಯಾಂಕನಿಂದ ಸಾಲ, ಮೈಕ್ರೋ ಕ್ರೇಡಿಟ್(ಪ್ರೇರಣಾ) ಯೋಜನೆ, ಭೂ ಓಡೆತನ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.  

ಜಿಲ್ಲಾ ಕಚೇರಿ ಮೂಲಕ ಅರ್ಜಿಗಳನ್ನು ಪಡೆದು ಮತ್ತು  ಅರ್ಜಿಗಳನ್ನು ವೆಬ್‍ಸೈಟ್‍ಗಳಲ್ಲಿ ಅರ್ಜಿಗಳನ್ನು ಡೌನಲೋಡ ಮಾಡಿಕೊಂಡು ಭರ್ತಿ ಮಾಡಿ ಅವಶ್ಯ ದಾಖಲೆಗಳಾದ ಜಾತಿ ಪತ್ರ (ಆರ್.ಡಿ ಸಂಖ್ಯೆ ಹೊಂದಿರಬೇಕು), ಆದಾಯ ಪತ್ರ (ಆರ್.ಡಿ ಸಂಖ್ಯೆ ಹೊಂದಿರಬೇಕು) ಚಾಲ್ತಿ), ರೇಶನ ಕಾರ್ಡ, ಆಧಾರ ಕಾರ್ಡ, ಫೋಟೋ-2, ಕೋಟೇಶನ್ ಹಾಗೂ ಯೋಜನಾ ವರದಿ, ದರಪಟ್ಟಿ ಹಾಗೂ ಬ್ಯಾಂಕ್ ಉಳಿತಾಯ ಖಾತೆಯನ್ನು ಸಲ್ಲಿಸಬೇಕು. ಜಿಲ್ಲಾ ಕಛೇರಿಗೆ ಸಲ್ಲಿಸಬಹುದು ಅಥವಾ ಆನ್‍ಲೈನ್‍ನಲ್ಲಿ ಭರ್ತಿ ಮಾಡಿ ಅವಶ್ಯ ದಾಖಲೆಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಿದ ಪ್ರತಿಯೊಂದಿಗೆ ಜಿಲ್ಲಾ ಕಛೇರಿಗೆ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಕೆಯು ಅಗಸ್ಟ್ 5 ರಿಂದಲೇ ಪ್ರಾರಂಭವಾಗಿದ್ದು, ಅಗಸ್ಟ್ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮ, ಹಳೆ ಜಿಲ್ಲಾ ಪಂಚಾಯತ್ ಕಟ್ಟಡ, ನೆಲಮಹಡಿ, ತಹಸೀಲ್ದಾರ ಕಚೇರಿ ಹಿಂಭಾಗ, ಕಾರವಾರ, ದೂರವಾಣಿ ಸಂಖ್ಯೆ 08382-226903 ಸಂಪರ್ಕಿಸಬಹುದು. ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ನಂತರ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.  ಮತ್ತು ಆಯಾ ತಾಲೂಕಾ ಸಮಾಜ ಕಲ್ಯಾಣ ಇಲಾಖೆಯಲ್ಲೂ ಸಹಾ ಮಾಹಿತಿ ಪಡೆದು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಡಾ: ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read These Next

ಲಾಕ್ ಡೌನ್ ಆಗಿ ನಷ್ಟ ಅನುಭವಿಸಿದ್ದೇವೆ. ಮಾನವೀಯ ನೆಲೆಯಲ್ಲಿ ಅವಕಾಶ ಮಾಡಿಕೊಡಲು ಭಟ್ಕಳ ವ್ಯಾಪಾರಸ್ಥರ ಮನವಿ.

ಭಟ್ಕಳ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ವ್ಯಾಪಾರ ನಡೆಸುತ್ತಿರುವ ಅಂಗಡಿಕಾರರು‌ ಲಾಕ್ ಡೌನ್ ಅವಧಿಯಲ್ಲಿ ನಷ್ಟ ಅನುಭವಿಸಿದ್ದು, ...