ಕಾರವಾರ: ಅರ್ಜಿ ಆಹ್ವಾನ

Source: S.O. News service | By S O News | Published on 3rd August 2021, 11:26 PM | Coastal News |

ಕಾರವಾರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2021-22 ನೇ ಶೈಕ್ಷಣಿಕ ಸಾಲಿನಲ್ಲಿ 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಉಳಿದ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

7 ಮತ್ತು 8ನೇ ತರಗತಿಯಲ್ಲಿ ವ್ಯಾಸಂಗ ಮಾಡಿರುವ ಮತ್ತು ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮುದಾಯದ ಮತ್ತು ವಿಶೇಷ ವರ್ಗದ ಆಸಕ್ತ ವಿದ್ಯಾರ್ಥಿಗಳು ಆ 14 ರವರೆಗೆ ಆನ್ ಲೈನ್ ಅಥವಾ ಆಫ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಆಯಾ ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲರಿಂದ ಅರ್ಜಿ ನಮೂನೆಯನ್ನು ಪಡೆದು ಜಾತಿ, ಆದಾಯ ಮತ್ತು ವಿಶೇಷ ವರ್ಗದ ಪ್ರಮಾಣ ಪತ್ರದೊಂದಿಗೆ ಜಿಲ್ಲಾ ಸಮನ್ವಯಾಧಿಕಾರಿಗಳ ಇ-ಮೇಲ್ –[email protected] ಗೆ PDF ನಲ್ಲಿ ಹಾಗೂ ಪಾಸ್ ಪೋರ್ಟ್ ಸೈಜ್ ಪೋಟೊ ಅನ್ನು email ನಲ್ಲಿ ಸ್ಕಾನ್ ಮಾಡಿ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8277340393 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ, ಉತ್ತರಕನ್ನಡಜಿಲ್ಲೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Read These Next

ಕಾರವಾರ: ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೂಚನೆ

ಮುಂದಿನ ಎರಡು ವರ್ಷದೊಳಗಾಗಿ ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದ್ದು, ...