ಮಕ್ಕಳ ಚಟುವಟಿಕೆಗೆ ಹೆಸರು ನೋಂದಾಯಿಸಲು ಆಹ್ವಾನ

Source: sonews | By Staff Correspondent | Published on 26th August 2019, 11:39 PM | Coastal News |

ಕಾರವಾರ :  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಪ್ರತಿ ಶನಿವಾರ ಸಂಜೆ ಮತ್ತು ಭಾನುವಾರ ಬೆಳಿಗ್ಗೆ ಸ್ತ್ರೀಶಕ್ತಿ ಸಭಾಭವನದಲ್ಲಿ 5 ರಿಂದ 16 ವರ್ಷ ವಯೋಮಾನದೊಳಗೆ ಮಕ್ಕಳಿಗೆ ಉಚಿತವಾಗಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. 

ಈ ಚಟುವಟಿಕೆ ಕಾರ್ಯಕ್ರಮವು ದಿನಾಂಕ: 08-09-2019 ರಿಂದ ಪ್ರಾರಂಭಿಸಲು ಉದ್ದೇಶಿಸಲಾಗಿದ್ದು ಈ ದಿನಗಳಂದು ಪ್ರಮುಖವಾಗಿ ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ ಮತ್ತು ಸಂಗೀತ, ರಂಗ ಚಟುವಟಿಕೆ, ಯೋಗ ಮತ್ತು ಕರಾಟೆ, ವಿಜ್ಞಾನ ಹಾಗೂ ಸಾಹಿತ್ಯಗಳ ಕುರಿತು ಚಟುವಟಿಕೆಗಳನ್ನು ನಡೆಸಲಾಗುತ್ತದೆ.

ಈ ಚಟುವಟಿಕೆಯು ಪ್ರತಿ ಶನಿವಾರ ಸಂಜೆ  3 ಗಂಟೆಯಿಂದ 5ಗಂಟೆಯವರೆಗೆ ಹಾಗೂ ಭಾನುವಾರ ಬೆಳಿಗ್ಗೆ 9 ರಿಂದ 12 ಗಂಟೆಯವರೆಗೆ ನಡೆಸಲಾಗುತ್ತದೆ. ಆದ್ದರಿಂದ ಚಟುವಟಿಕೆಯಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳ ಹೆಸರನ್ನು ದಿನಾಂಕ: 24-08-2019 ರೊಳಗಡೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಇÀವರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಇವರನ್ನು ಅಥವಾ ಮೊಬೈಲ್ ಸಂಖ್ಯೆ: 9380725396 ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...