ಪ್ರತಿಕೋದ್ಯಮ ಅಪ್ರೆಂಟಿಸ್ ತರಬೇತಿ ಅರ್ಜಿ ಆಹ್ವಾನ  

Source: sonews | By Staff Correspondent | Published on 22nd October 2020, 10:52 PM | Coastal News |

ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವಿಧರರಿಗೆ ಪತ್ರಿಕೋದ್ಯಮ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.

2020-21ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಚೇರಿಗೆ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 

ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ ರೂ.15 ಸಾವಿರ ಸ್ಟೈಪಂಡ್ ನೀಡಲಾಗುವುದು. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯದಿನವಾಗಿರುತ್ತದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಹೊಂದಿರಬೇಕು. ವಯಸ್ಸು 40 ವರ್ಷದೊಳಗಿರಬೇಕು.

ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ 2 ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸುವುದು. 

ಅರ್ಜಿ ನಮೂನೆ ಹಾಗೂ ಇತರ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಭವನ ಜಿಲ್ಲಾಧಿಕಾರಿ ಕಚೇರಿ ಹತ್ತಿರ ಕಾರವಾರ-581301, ದೂರವಾಣಿ ಸಂಖ್ಯೆ: 08382- 226344 ಅಥವಾ  ಇ-ಮೇಲ್:                                                            [email protected] ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...