ಐಪಿಎಲ್ 2020: ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವ ವಿಶ್ವಾಸವಿದೆ- ಕೆವಿನ್ ಪೀಟರ್ಸನ್

Source: ANI | Published on 12th September 2020, 7:03 PM | Sports News | Don't Miss |

ನವದೆಹಲಿ: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಐಪಿಎಲ್ 13ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವ ವಿಶ್ವಾಸ ಹೊಂದಿರುವುದಾಗಿ ಇಂಗ್ಲೆಂಡ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಹೇಳಿದ್ದಾರೆ.
ಇತ್ತೀಚಿಗೆ ಮುಕ್ತಾಯವಾದ ಇಂಗ್ಲೆಂಡ್-ಆಸೀಸ್ ನಡುವಣ ಟಿ-20 ಸರಣಿಯಲ್ಲಿ ವೀಕ್ಷಣ ವಿವರಣೆಗಾರರಾಗಿದ್ದ ಪೀಟರ್ಸನ್ , ಇದೀಗ ಸೌಥಾಂಪ್ಟನ್ ನಿಂದ ದುಬೈಗೆ ತೆರಳಿದ್ದಾರೆ.
ಈ ಕುರಿತು ಇನ್ಸಾಟಾಗ್ರಾಮ್ ನಲ್ಲಿ ಮಾಹಿತಿ ನೀಡಿರುವ ಕೆವಿನ್ ಪೀಟರ್ಸನ್, ನಾವು ಮತ್ತೆ ಕ್ರಿಕೆಟ್ ಗೆ ಮರಳಿರುವುದಕ್ಕೆ ಸಂತೋಷವಾಗುತ್ತಿದೆ. ಐಪಿಎಲ್ 2020ಯಲ್ಲಿ ಕೆಲಸ ಮಾಡುವುದಕ್ಕೆ ಯಾವಾಗಲೂ ಅತ್ಯಂತ ಖುಷಿಪಡುತ್ತೇನೆ ಎಂದು ಹೇಳಿರುವ ಅವರು, ಈ ಬಾರಿ ಯಾರು ಗೆಲ್ಲುತ್ತಾರೆ ? ಎಂದು ಪ್ರಶ್ನಿಸಿದ್ದು, ಡೆಲ್ಲಿ ಕ್ಯಾಪಿಟಲ್ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.
ಪೀಟರ್ಸನ್ ಆಡುವ ಸಮಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಡೇರ್ ಡೆವಿಲ್ಸ್ ಮತ್ತು ರೈಸಿಂಗ್ ಪುಣೆ ತಂಡವನ್ನು ಪ್ರತಿನಿಧಿಸಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಈ ಬಾರಿ ಶ್ರೇಯಸ್ಸು ಮುನ್ನಡೆಸುತ್ತಿದ್ದಾರೆ. ಶಿಖರ್ ಧವನ್, ರವಿ ಅಶ್ವಿನ್ ಮತ್ತು ಅಜಿಂಕ್ಯಾ ರಹಾನೆ ಮತ್ತಿತರರು ಆ ತಂಡದಲ್ಲಿದ್ದಾರೆ.

 

Read These Next

ಐತಿಹಾಸಿಕ ಸ್ವರ್ಣ ಗೆದ್ದ ಸುಮಿತ್, ಅವನಿ; ಭಾರತಕ್ಕೆ ಒಂದೇ ದಿನ 2 ಚಿನ್ನ ಸಹಿತ ಐದು ಪದಕ

ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಪ್ಯಾರಾಲಿಂಪಿಕ್ಸ್ ಅಂಟಿಲ್ ಎಫ್64 ಸ್ಪರ್ಧೆಯಲ್ಲಿ 68.55 ಮೀ.ದೂರಕ್ಕೆ * ಜಾವಲಿನ್ ಎಸೆದು ತನ್ನದೇ ವಿಶ್ವ ...

ಈ ಬಾರಿ ಅರ್ಥಪೂರ್ಣ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಿರ್ಧಾರ: ಡಾ. ಕೆ.ಸಿ ನಾರಾಯಣಗೌಡ

ಮಂಡ್ಯ : ಅಕ್ಟೋಬರ್ 9, 10 ಮತ್ತು 11 ರಂದು ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣ ದಸರಾ ಆಚರಣೆಗೆ ...

ಅಂಕೋಲಾದ ಅನ್ನದಂಗಳದಲ್ಲಿ ಮಾತುಕತೆ ಕಾರ್ಯಕ್ರಮ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ. ಕೃಷಿಕರೊಂದಿಗೆ ಸಂವಾದ

ಕಾರವಾರ : ರೈತರ ಏಳಿಗೆಯ ಜೊತೆ ಕೃಷಿಯಲ್ಲಿ ದೇಶ ಸ್ವಾವಲಂಬಿಯಾಗುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರವು ರೈತ ಸ್ನೇಹಿ ಸರ್ಕಾರವಾಗಿ ...