ಆರ್ ಸಿಬಿ ವಿರುದ್ಧ ಡೆಲ್ಲಿ ಜಯಭೇರಿ, ಪ್ಲೇ ಆಫ್ ಗೆ ಲಗ್ಗೆ

Source: sonews | By Staff Correspondent | Published on 2nd November 2020, 11:12 PM | Gulf News | Sports News |

ಅಬುಧಾಬಿ:  ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್(54) ಹಾಗೂ ಅಜಿಂಕ್ಯ ರಹಾನೆ ಅರ್ಧ ಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ ಗಳಿಂದ ಮಣಿಸಿ ಈ ವರ್ಸಷದ ಐಪಿಎಲ್ ನಲ್ಲಿ ಪ್ಲೇ ಆಫ್ ಗೆ ಲಗ್ಗೆ ಇಟ್ಟಿದೆ.ಸತತ ನಾಲ್ಕು ಪಂದ್ಯಗಳಲ್ಲಿ ಸೋತು ಕಂಗಾಲಾಗಿದ್ದ ಡೆಲ್ಲಿ ಸತತ ಎರಡನೇ ವರ್ಷ ಪ್ಲೇ ಆಫ್ ಗೆ ತೇರ್ಗಡೆಯಾಗಿದೆ.

ಗೆಲ್ಲಲು 154 ರನ್ ಗುರಿ ಪಡೆದಿದ್ದ ಡೆಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಪೃಥ್ವಿ ಶಾ ವಿಕೆಟನ್ನು ಬೇಗನೆ ಕೇಳದುಕೊಂಡಿದ್ದರೂ ಇನ್ನೂ ಒಂದು ಓವರ್ ಬಾಕಿ ಇರುವಾಗಲೇ 4 ವಿಕೆಟ್ ಗಳ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು.

ಡೆಲ್ಲಿ 19 ರನ್ ಗಳಿಸಿದ್ದಾಗ ಶಾ ವಿಕೆಟ್ ಕೈ ಚೆಲ್ಲಿದರು. ಆಗ 2ನೇ ವಿಕೆಟ್ ಜೊತೆಯಾಟದಲ್ಲಿ 88 ರನ್ ಸೇರಿಸಿದ ಧವನ್(54, 41 ಎಸೆತ, 6 ಬೌಂಡರಿ)  ಹಾಗೂ ರಹಾನೆ(60 ರನ್, 46 ಎಸೆತ, 5 ಬೌಂ.)ತಂಡವನ್ನು ಗೆಲುವಿನ ದಡ ಸೇರಿಸಿದರು.

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್