ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ : ಎರಡು ಬುಕ್ಕಿಗಳ ಪೊಲೀಸರಿಂದ ಬಂಧನ..!

Source: so news | By MV Bhatkal | Published on 31st March 2019, 12:47 AM | Coastal News | Don't Miss |

ಮಂಗಳೂರು:ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ ಮಂಗಳೂರಿನಲ್ಲಿ ದಾಖಲಾಗಿದೆ. ಇದು ಮಂಗಳೂರಿನಲ್ಲಿ 3ನೇ ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಲಕ್ಷಿತ್,ನಿತಿನ್ ಎಂಬ ಎರಡು ಐಪಿಎಲ್ ಕ್ರಿಕೆಟ್ ಬುಕ್ಕಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಮೂರುಲಕ್ಷ ತೊಂಬತ್ತಾರು ಸಾವಿರ ನಗದು ವಶ ಪಡಿಸಿಕೊಂಡಿದ್ದಾರೆ.ಮಂಗಳೂರಿನಿಂದ ಪರಾರಿಯಾದ ಮತ್ತಿಬ್ಬರು ಬುಕ್ಕಿಗಳು ಪರಾರಿಯಾಗಿದ್ದಾರೆ.ಪರಾರಿಯಾದ ಬುಕ್ಕಿಗಳನ್ನು ಮಂಗಳೂರು ಪೊಲೀಸರು ಶೋಧ ನಡೆಸುತ್ತಿದ್ದಾರೆ.ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕ್ರಿಕೆಟ್ ಬುಕ್ಕಿಗಳು ಹೆಚ್ಚುತ್ತಿದ್ದು,ಆನೇಕ ಕಾಲೇಜು ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ.ಒಂದು ಕಡೆ ಕಾಲೇಜು ವಿದ್ಯಾರ್ಥಿಗಳು ಹಣದ ಆಸೆಗಾಗಿ ಕ್ರಿಕೆಟ್ ಬೆಟ್ಟಿಂಗ್ ಬಲಿಯಾದರೆ.ಇನ್ನೊಂದು ಕಡೆ ಬುಕ್ಕಿಗಳು ಬೆಟ್ಟಿಂಗ್ ನಲ್ಲಿ ಸೋಲು ಅನುಭವಿಸಿದವರಿಗೆ ಬೆದರಿಕೆ ಹಾಕಿದ ಪ್ರಕರಣಗಳು ಹೆಚ್ಚುತ್ತಿವೆ.
ಕ್ರಿಕೆಟ್ ನಲ್ಲಿ ಹಣ ಕಳಕೊಂಡವರು ಬುಕ್ಕಿಗಳ ಬೆದರಿಕೆಗೆ ಆತ್ಮಹತ್ಯೆ ಯತ್ನಿಸಿದ ಘಟನೆ ಹೆಚ್ಚುತ್ತಿದೆ. ಪೊಲೀಸ್ ಕ್ರಿಕೆಟ್ ಬುಕ್ಕಿಗಳಿಗೆ ಕಡಿವಾಣ ಹಾಕದ್ದಿದ್ದರೆ,ಕಾಲೇಜು ಹುಡುಗರು ದಾರಿ ತಪ್ಪುತ್ತಾರೆ.ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ.ಇನ್ನಾದರು ಪೊಲೀಸ್ ಇಲಾಖೆ ಕ್ರಿಕೆಟ್ ಬುಕ್ಕಿಗಳ ಬಗ್ಗೆ ಎಚ್ಚೆತ್ತುಕೊಳ್ಳಲಿ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...