ಕೋವಿಡ್-19ರ ಸೋಂಕಿಗೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಉತ್ತಮ: ಸಚಿವ ಕೆ.ಸುಧಾಕರ್

Source: SO News | By Laxmi Tanaya | Published on 27th January 2022, 10:35 PM | State News | Don't Miss |

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಕೋವಿಡ್-19ರ ಮೂರನೇ ಅಲೆಯಲ್ಲಿ ಸೋಂಕಿನ ಗುಣಲಕ್ಷಣಗಳು ಸೌಮ್ಯವಾಗಿದ್ದು, ತೀವ್ರತೆಯಿರದಿದ್ದರೂ ಸಹ ಜನತೆ ನಿರ್ಲಕ್ಷ್ಯ ವಹಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಉತ್ತಮ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಕೆ. ಸುಧಾಕರ್ ಅವರು ತಿಳಿಸಿದರು.

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ಕೃಷಿ ಇಲಾಖೆ ವತಿಯಿಂದ ನಿರ್ಮಿಸಲಾದ "ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡ" ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಅವರು ಮಾತನಾಡಿದರು. 

  ಕಳೆದ ವರ್ಷದ ಬಜೆಟ್‌ನಲ್ಲಿ ಮೊದಲ ಹಂತದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ನಿರ್ಣಯ ಕೈಗೊಳ್ಳಲಾಗಿದ್ದು, ಪ್ರತಿ ವರ್ಷ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳಂತೆ ಐದು ವರ್ಷಗಳಲ್ಲಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಿದ್ದೇವೆ ಎಂದು ತಿಳಿಸಿದರು.

  ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನವಾದ ಜಿಲ್ಲಾಸ್ಪತ್ರೆ ಸ್ಥಾಪನೆಗೆ ಕ್ರಮ ವಹಿಸಲಾಗುವುದು ಎಂದರಲ್ಲದೆ, ಕ್ಯಾಬಿನೆಟ್‌ನಲ್ಲಿ ಶೀಘ್ರದಲ್ಲಿ ನಿರ್ಣಯ ಕೈಗೊಂಡು ಹೊಸಕೋಟೆಯಲ್ಲಿ ತಾಯಿ ಮತ್ತು ಮಗುವಿನ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.

  ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಅಥವಾ ಖಾಸಗಿ ಒಡೆತನದಲ್ಲಿರುವ ವೈದ್ಯಕೀಯ ಕಾಲೇಜುಗಳಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದಿರುವ ಜಿಲ್ಲೆಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವ(ಪಿಪಿಪಿ)ದಡಿ ನೂತನ ವೈದ್ಯಕೀಯ ಕಾಲೇಜು ಪ್ರಾರಂಭಿಸಬಹುದಾಗಿದೆ ಎಂದು ಹೇಳಿದರು.

  ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಕೋವಿಡ್ ಲಸಿಕಾಕರಣದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದು, ಲಸಿಕಾಕರಣ ಪ್ರಗತಿಗೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಆರೋಗ್ಯ ಕಾರ್ಯಕರ್ತರು, ಸಿಬ್ಬಂದಿಗಳು, ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರು ನೀಡಿರುವ ಸಹಕಾರವು ಮೆಚ್ಚುವಂತದ್ದು ಎಂದು ಹೇಳಿದರು.

  ಕಾರ್ಯಕ್ರಮದಲ್ಲಿ ಪೌರಾಡಳಿತ, ಸಣ್ಣ ಕೈಗಾರಿಕೆಗಳು, ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೋವಿಡ್ ಉಸ್ತುವಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು (ಎಂ.ಟಿ.ಬಿ), ಕೃಷಿ ಸಚಿವ ಬಿ.ಸಿ.ಪಾಟೀಲ್, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ, ಉಪ ನಿರ್ದೇಶಕಿ ವಿನುತಾ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ರೈತ ಮುಖಂಡರುಗಳು ಉಪಸ್ಥಿತರಿದ್ದರು.
  ಇದೇ ವೇಳೆ ಕೃಷಿ ಇಲಾಖೆಯ ವಿವಿಧ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...