ಅಹ್ಮದಾಬಾದ್: ಇಸ್ರತ್ ಜಹಾನ್ ನಕಲಿ ಎನ್‌ಕೌಂಟರ್‌ ಪ್ರಕರಣ ಕೊನೆಯ ಮೂವರು ಆರೋಪಿಗಳ ಖುಲಾಸೆ

Source: VB | By S O News | Published on 3rd April 2021, 12:56 AM | National News |

ಅಹ್ಮದಾಬಾದ್: 2004 ಜೂನ್‌ನಲ್ಲಿ ನಡೆದ ಇಸ್ರತ್ ಜಹಾನ್, ಜಾವೇದ್‌ ಶೇಖ್ ಅಲಿಯಾಸ್ ಪ್ರಾಣೇಶ್ ಪಿಳ್ಳೈ ಹಾಗೂ ಇತರ ಇಬ್ಬರ ಕಾನೂನು ಬಾಹಿರ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ಮೂವರು ಪೊಲೀಸರನ್ನು ಅಹ್ಮದಾಬಾದ್‌ನ ವಿಶೇಷ ಸಿಬಿಐ ನ್ಯಾಯಾಲಯ ಖುಲಾಸೆಗೊಳಿಸಿದೆ.

ಮೂವರು ಪೊಲೀಸ್ ಅಧಿಕಾರಿಗಳಾದ ಐಪಿಎಸ್ ಅಧಿಕಾರಿ ಜಿ.ಎಲ್ ಸಿಂಘಾಲ್, ನಿವೃತ್ತ ಪೊಲೀಸ್ ಅಧಿಕಾರಿ ತರುಣ್ ಬರೋಟ್ ಹಾಗೂ ಅನು ಚೌಧರಿ ತಮ್ಮನ್ನು ಖುಲಾಸೆಗೊಳಿಸುವಂತೆ ಮಾರ್ಚ್ 20ರಂದು ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಮೂವರ ವಿರುದ್ಧದ ವಿಚಾರಣೆಯನ್ನು ನ್ಯಾಯಾಲಯ ಕೈಬಿಟ್ಟಿದೆ. ಸಿಬಿಐ ಮೇಲ್ಮನವಿ ಸಲ್ಲಿಸದೇ ಇದ್ದಲ್ಲಿ ಈ ಪ್ರಕರಣದ ವಿಚಾರಣೆ ವಸ್ತುಶಃ ಅಂತ್ಯಗೊಳ್ಳಲಿದೆ.

ವಿಶೇಷ ಸಿಬಿಐ ನ್ಯಾಯಾಧೀಶ ವಿ.ಆರ್. ರಾವಲ್, ಹತ್ಯೆಗೀಡಾದ ಇಶ್ರತ್ ಜಹಾನ್ ಹಾಗೂ ಇತರ ನಾಲ್ವರು ಭಯೋತ್ಪಾದಕರು ಅಲ್ಲ ಎಂದು ಹೇಳಲು ಮೇಲ್ನೋಟಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಪ್ರಜೆಗಳು ಎಂದು ಹೇಳಲಾದ ಇಶ್ರತ್ ಜಹಾನ್‌, ಪ್ರಾಣೇಶ್ ಪಿಳ್ಳೈ , ಅಮ್ಜದ್ ಅಲಿ ರಾಣಾ ಹಾಗೂ ಝೇಶಾನ್ ಜೋಹರ್ ಅವರನ್ನು 2004 ಜೂನ್ 15ರಂದು ಅಹ್ಮದಾಬಾದ್‌ನ ಹೊರವಲಯದ ಕೊಟಾರ್‌ಪುರದ ಸಮೀಪ ವಂಝಾರಾ ನೇತೃತ್ವದ

ಅಹ್ಮದಾಬಾದ್ ನಗರ ಕ್ರೈಮ್ ಬ್ರಾಂಚ್ ಹತ್ಯೆಗೈದಿತ್ತು.

ಆರೋಪಿಗಳ ಖುಲಾಸೆ

ಅನಂತರ ಡಿಸಿಬಿ ಹೇಳಿಕೆ ನೀಡಿ, ಗುಜರಾತ್‌ನ ಆಗಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರನ್ನು ಹತ್ಯೆಗೈಯಲು ಲಷ್ಕರೆ ತಯ್ಯಬದ ಈ ನಾಲ್ವರು ಕಾರ್ಯಕರ್ತರು ಸಂಚು ರೂಪಿಸಿದ್ದರು ಎಂದು ಹೇಳಿತ್ತು. 2013ರಲ್ಲಿ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಸಿಬಿಐ ಪಿ.ಪಿ. ಪಾಂಡೆ, ವಂಝಾರ, ಎನ್.ಕೆ. ಅಮೀನ್, ಜೆ.ಜಿ ಪರ್ಮಾರ್‌, ಸಿಂಘಾಲ್, ಬರೋಟ್ ಹಾಗೂ ಚೌದರಿ ಅವರು ಆರೋಪಿಗಳು ಎಂದು ಹೆಸರಿಸಿತ್ತು. ಎಲ್ಲಾ ಆರೋಪಿಗಳ ವಿರುದ್ದ ಹತ್ಯೆ, ಅಪಹರಣ, ಸ್ನಾಕ್ಯ ನಾಶ ಹಾಗೂ ಇತರ ಆರೋಪಗಳನ್ನು ಹೊರಿಸಲಾಗಿತ್ತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...