ಇಸ್ರೇಲ್-ಹಮಾಸ್ ಸಂಘರ್ಷ; ಮೋದಿ-ಸುನಕ್ ಮಾತುಕತೆ

Source: Vb | By I.G. Bhatkali | Published on 5th November 2023, 8:06 AM | National News |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಶುಕ್ರವಾರ ದೂರವಾಣಿಯಲ್ಲಿ ಮಾತುಕತೆಗಳನ್ನು ನಡೆಸಿದ್ದು, ಪಶ್ಚಿಮ ಏಶ್ಯದಲ್ಲಿನ ಬೆಳವಣಿಗೆಗಳು ಮತ್ತು ಇಸ್ರೇಲ್-ಹಮಾಸ್ ನಡುವಿನ ಸಂಘರ್ಷದ ಕುರಿತು ಚರ್ಚಿಸಿದರು.

ಭಯೋತ್ಪಾದನೆ, ಹದಗೆಡುತ್ತಿರುವ ಭದ್ರತಾ ಸ್ಥಿತಿ ಮತ್ತು ನಾಗರಿಕರ ಜೀವಹಾನಿಗಳ ಬಗ್ಗೆ ಉಭಯ ನಾಯಕರು ತೀವ್ರ ಕಳವಳಗಳನ್ನು ವ್ಯಕ್ತಪಡಿಸಿದರು. ಪ್ರಾದೇಶಿಕ ಶಾಂತಿ, ಭದ್ರತೆ, ಸ್ಥಿರತೆ ಮತ್ತು ನಿರಂತರ ಮಾನವೀಯ ನೆರವಿನ ಅಗತ್ಯವನ್ನು ಅವರು ಒಪ್ಪಿಕೊಂಡರು ಎಂದು ಪ್ರಧಾನಿ ಕಚೇರಿಯು ಹೇಳಿಕೆಯಲ್ಲಿ ತಿಳಿಸಿದೆ.

ಪ್ರಧಾನಿಯಾಗಿ ಒಂದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ಮೋದಿಯವರು ಸುನಕ್‌ರನ್ನು ಅಭಿನಂದಿಸಿದರು ಮತ್ತು ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದವನ್ನು ಶೀಘ್ರ ಅಂತಿಮಗೊಳಿಸಲು ನಡೆಯುತ್ತಿರುವ ಪ್ರಯತ್ನಗಳಲ್ಲಿ ಪ್ರಗತಿಯನ್ನು ಉಭಯ ನಾಯಕರು ಸ್ವಾಗತಿಸಿದರು ಎಂದು ಹೇಳಿಕೆಯು ತಿಳಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮೋದಿ, 'ಬ್ರಿಟನ್ ಪ್ರಧಾನಿ ರಿಷಿ ಸುನಕ್ ಜೊತೆ ಮಾತುಕತೆಗಳನ್ನು ನಡೆಸಿದ್ದೇನೆ. ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಗೆ ಮಾರ್ಗಗಳನ್ನು ಚರ್ಚಿಸಿದೆವು ಮತ್ತು ಪಶ್ಚಿಮ ಏಶ್ಯದಲ್ಲಿನ ಪರಿಸ್ಥಿತಿಯ ಕುರಿತು ಪರಸ್ಪರ ಅಭಿಪ್ರಾಯಗಳನ್ನು ವಿನಿಮಯಿಸಿಕೊಂಡೆವು. ಭಯೋತ್ಪಾದನೆ ಮತ್ತು ಹಿಂಸೆಗೆ ಜಾಗವಿರಬಾರದು ಎಂದು ನಾವು ಒಪ್ಪಿಕೊಂಡಿದ್ದೇವೆ' ಎಂದು ಹೇಳಿದ್ದಾರೆ.

ನಾಗರಿಕರ ಸಾವು ತೀವ್ರ ಕಳವಳಕಾರಿಯಾಗಿದೆ. ಪ್ರಾದೇಶಿಕ ಶಾಂತಿ, ಭದ್ರತೆ, ಸ್ಥಿರತೆ ಮತ್ತು ನಿರಂತರ ಮಾನವೀಯ ನೆರವಿಗಾಗಿ ಶ್ರಮಿಸುವ ಅಗತ್ಯವಿದೆ ಎಂದೂ ಅವರು ತಿಳಿಸಿದ್ದಾರೆ.

ವ್ಯಾಪಾರ, ಹೂಡಿಕೆ, ನವೀನ ತಂತ್ರಜ್ಞಾನ, ರಕ್ಷಣೆ, ಭದ್ರತೆ, ಆರೋಗ್ಯ ಇತ್ಯಾದಿ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಬಲವರ್ಧನೆಗೆ ಮುಂದುವರಿಯುವ ತಮ್ಮ ಬದ್ಧತೆಗಳನ್ನು ಉಭಯ ನಾಯಕರು ಪುನರುಚ್ಚರಿಸಿದರು ಎಂದು ಹೇಳಿಕೆಯು ತಿಳಿಸಿದೆ.

ಪರಸ್ಪರ ಸಂಪರ್ಕದಲ್ಲಿರಲು ಉಭಯ ನಾಯಕರು ಒಪ್ಪಿಕೊಂಡರು ಮತ್ತು ದೀಪಾವಳಿ ಶುಭಾಶಯಗಳನ್ನು ಪರಸ್ಪರ ವಿನಿಮಯಿಸಿಕೊಂಡರು ಎಂದೂ ಹೇಳಿಕೆಯು ತಿಳಿಸಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...