ಜೈಶ್ರೀರಾಂ ಹೇಳುವಂತೆ ಒತ್ತಾಯಿಸಿ ಮುಸ್ಲಿಮರನ್ನು ಥಳಿಸಿದ ದುಷ್ಕರ್ಮಿಗಳಿಂದ ಸಂತೃಸ್ತರನ್ನು ರಕ್ಷಿಸಿದ ಹಿಂದೂ ದಂಪತಿ

Source: sonews | By Staff Correspondent | Published on 20th July 2019, 3:57 PM | National News | Don't Miss |

ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಗುಂಪೊಂದು ವ್ಯಕ್ತಿಯೊಬ್ಬನಿಗೆ ಥಳಿಸಿ ‘ಜೈ ಶ್ರೀ ರಾಮ್’ ಹೇಳುವಂತೆ ಬಲವಂತಪಡಿಸಿದ ಘಟನೆ ನಡೆದಿದ್ದು, ಹಿಂದೂ ದಂಪತಿಯೊಂದು ಕೂಡಲೇ ರಕ್ಷಣೆಗೆ ಧಾವಿಸಿ ಆತನ ಪ್ರಾಣವುಳಿಸಿದೆ.

ಸಂತ್ರಸ್ತ ಇಮ್ರಾನ್ ಇಸ್ಮಾಯಿಲ್ ಪಟೇಲ್ ಹೋಟೆಲ್ ಉದ್ಯೋಗಿಯಾಗಿದ್ದು, ಬೆಳಗ್ಗೆ ಮನೆಗೆ ಹಿಂದಿರುಗುತ್ತಿದ್ದಾಗ ಬೇಗಂಪುರ ಪ್ರದೇಶದ ಹುಡ್ಕೊ ಕಾರ್ನರ್ ಸಮೀಪ ಸುಮಾರು ಹತ್ತು ಮಂದಿ ದುಷ್ಕರ್ಮಿಗಳಿದ್ದ ತಂಡ ತಡೆದು ನಿಲ್ಲಿಸಿ ಥಳಿಸಿತ್ತು. ನಂತರ ಮೂರು ಬಾರಿ ‘ಜೈ ಶ್ರೀ ರಾಮ್’ ಹೇಳುವಂತೆ ಬಲವಂತಪಡಿಸಿದೆ.

ಅಲ್ಲಿಯೇ ಹತ್ತಿರದಲ್ಲಿ ವಾಸಿಸುತ್ತಿದ್ದ ಹಿಂದೂ ದಂಪತಿ ಇಸ್ಮಾಯೀಲ್ ರ ಬೊಬ್ಬೆ ಕೇಳಿ ತಮ್ಮ ಮನೆಯಿಂದ ಹೊರಗೆ ಧಾವಿಸಿ ಆತನನ್ನು ರಕ್ಷಿಸಿದ್ದಾರಲ್ಲದೆ, ಏನೂ ಮಾಡದಂತೆ ದಾಳಿಕೋರರನ್ನು ವಿನಂತಿಸಿದ್ದಾರೆ. ನಂತರ ದಾಳಿಕೋರರ ಕೈಯಲ್ಲಿದ್ದ ಇಮ್ರಾನ್ ಬೈಕ್ ನ ಕೀಯನ್ನು ದಾಳಿಕೋರರಿಂದ ಬೇಡಿ ಪಡೆದು ಅದನ್ನು ಇಸ್ಮಾಯೀಲ್ ಗೆ ಹಿಂದಿರುಗಿಸಿ ಆತ ಸುರಕ್ಷಿತವಾಗಿ ಮನೆಗೆ ತೆರಳುವಂತೆ ದಂಪತಿ ನೋಡಿಕೊಂಡಿದ್ದಾರೆ.

ತಮ್ಮ ವಿರುದ್ಧ ದಾಳಿಕೋರರು ಪ್ರತೀಕಾರ ತೆಗೆದುಕೊಳ್ಳಬಹುದೆಂಬ ಭಯದಿಂದ ಘಟನೆಯ ನಂತರ ದಂಪತಿ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಐಪಿಸಿ ಸೆಕ್ಷನ್ 153ಎ ಹಾಗೂ 144 ಅನ್ವಯ ಪ್ರಕರಣ ದಾಖಲಿಸಲಾಗಿದೆ.

Read These Next

ನಿರಾಶಾವಾದಿ ರಾಜಕಾರಣದ ಹುಟ್ಟು

ಸ್ಪಷ್ಟ ಜನಾದೇಶವಿಲ್ಲದಂತ ಅನಿಶ್ಚಿತ ರಾಜಕೀಯ ಸಂದರ್ಭಗಳು ಸಂಸ್ಥೆಗಳ, ರಾಜಕೀಯ ಪಕ್ಷಗಳ ಮತ್ತು ಅದರ ನಾಯಕರ ರಾಜಕೀಯ ಜೀವನದಲ್ಲಿ ಇಂಥಾ ...

ಅಯೋಧ್ಯಾ- ಜಾಗವೋ? ಅವಕಾಶದ ಹರಹೋ?

ವಾಸ್ತವವಾಗಿ ನೋಡುವುದಾದರೆ ಇತ್ತೀಚೆಗೆ ಸುಪ್ರೀಂ ಕೋರ್ಟು ನೀಡಿರುವ ಅಯೋಧ್ಯಾ ತೀರ್ಪು ವಿವಿಧ ವಾದಿ-ಪ್ರತಿವಾದಿಗಳು ವ್ಯಾಜ್ಯ ...

ನದಿಗೆ ಕೊಳಚೆ ನೀರು ಸೇರ್ಪಡೆ: ಮಣ್ಕುಳಿ ಮತ್ತು ಮಾರುತಿ ನಗರ ಅಭಿವೃದ್ಧಿ ಸಮಿತಿಯಿಂದ ಪಂಚಾಯತಗೆ ಮನವಿ ಸಲ್ಲಿಕೆ’

ನದಿಗೆ ಕೊಳಚೆ ನೀರು ಸೇರ್ಪಡೆ: ಮಣ್ಕುಳಿ ಮತ್ತು ಮಾರುತಿ ನಗರ ಅಭಿವೃದ್ಧಿ ಸಮಿತಿಯಿಂದ ಪಂಚಾಯತಗೆ ಮನವಿ ಸಲ್ಲಿಕೆ’

ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು - ಸಚಿವ ಜಗದೀಶ ಶೆಟ್ಟರ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು - ಸಚಿವ ಜಗದೀಶ ಶೆಟ್ಟರ್