ತಬ್ಲಿಗಿ ಜಮಾಅತ್ ಸಮ್ಮೇಳನ; ಸುಳ್ಳು ಸುದ್ದಿ ಹರುತ್ತಿರುವ ಮಾಧ್ಯಮಗಳ ವಿರುದ್ಧ ಸುಪ್ರಿಂ ಕೋರ್ಟ್ ಮೆಟ್ಟಲೇರಿದ ಯತ್ ಉಲೇಮಾ ಹಿಂದ್

Source: sonews | By Staff Correspondent | Published on 7th April 2020, 6:21 PM | National News |

ನವದೆಹಲಿ: ಮಾರ್ಚ್ ನಲ್ಲಿ ದೆಹಲಿಯಲ್ಲಿ ನಡೆದ ತಬ್ಲಿಗೀ ಜಮಾಅತ್ ಸಮ್ಮೇಳನದ ಹೆಸರಲ್ಲಿ ಮಾಧ್ಯಮದ ಒಂದು ವರ್ಗವು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷವನ್ನು ಹರಡುತ್ತಿದ್ದು ಇಂತಹ ಸುಳ್ಳು ಸುದ್ದಿಗಳ ಪ್ರಸಾರವನ್ನು ತಡೆಯುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕು ಮತ್ತು  ಸುಳ್ಳು ಸುದ್ದಿಯನ್ನು ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಸೂಚಿಸಬೇಕು ಎಂದು ಆಗ್ರಹಿಸಿ ಜಮೀಯತೆ ಉಲಮಾಯೆ ಹಿಂದ್ ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಿದೆ.

ಜಮೀಯತೆ ಉಲಮಾಯೆ ಹಿಂದ್ ನ ಪರವಾಗಿ ನ್ಯಾಯವಾದಿ ಎಜಾಜ್ ಮಕ್ಬೂಲ್ ಅವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಿದ್ದು ತಬ್ಲೀಗಿ ಜಮಾಅತ್ ನ ಸಮೀಲನದಿಂದಾಗಿ ಏನು ನಡೆದಿದೆಯೋ ಅದು ದುರದೃಷ್ಟಕರ ಮತ್ತು ಅದರ ಹೆಸರಲ್ಲಿ ಇಡೀ ಮುಸ್ಲಿಂ ಸಮುದಾಯವನ್ನು ದೂಷಿಸುವುದು ಅನ್ಯಾಯ ಎಂದವರು ಹೇಳಿದ್ದಾರೆ.

ತಬ್ಲೀಗಿ ಜಮಾಅತಿನ ಹೆಸರಲ್ಲಿ ಇಡೀ ಮುಸ್ಲಿಂ ಸಮುದಾಯವನ್ನು ಕಟಕಟೆಯಲ್ಲಿ ನಿಲ್ಲಿಸುವುದು ಸಮಾಜದ ಕೋಮು ಸೌಹಾರ್ದ ವಾತಾವರಣಕ್ಕೆ ಹೊಡೆತವನ್ನು ನೀಡಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಮಾಧ್ಯಮದ ಎಲ್ಲ ವಿಭಾಗಗಳು ಜವಾಬ್ದಾರಿಯವಾಗಿ ವರ್ತಿಸಬೇಕೆಂದು ಖಚಿತವಲ್ಲದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದೂ ಸುಪ್ರೀಂಕೋರ್ಟ್ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ವಿನಂತಿಸಲಾಗಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...