ಪಿಡಿಪಿ ಯಿಂದ  ಮೈತ್ರಿ  ಕಡಿದುಕೊಂಡ ಬಿಜೆಪಿ; ಮುಖ್ಯಮಂತ್ರಿ ಹುದ್ದೆಗೆ ಮಹೆಬೂಬ ರಾಜಿನಾಮೆ

Source: S O News service | By Staff Correspondent | Published on 19th June 2018, 4:39 PM | National News |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನು ಬಿಜೆಪಿ ಕಡಿದುಕೊಳ್ಳಲು ನಿರ್ಧರಿಸಿದ್ದು, ಈ ಸಂಬಂಧ ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ಇದರೊಂದಿಗೆ ಮೂರು ವರ್ಷಗಳ ಹಿಂದೆ ರಚನೆಯಾಗಿದ್ದ ಪಿಡಿಪಿ-ಬಿಜೆಪಿ ನೇತೃತ್ವದ ಸರಕಾರ ಈಗ ಮುರಿದು ಬಿದ್ದಿದ್ದು ಈ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಮಹೆಬೂಬ ಮುಫ್ತಿ ತನ್ನ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿಯೊಂದಿಗೆ ಬಿಜೆಪಿಯ ಮೈತ್ರಿ ಮುಂದುವರಿಸಲು ಸಾಧ್ಯವಿಲ್ಲ. ಈ ಕಾರಣದಿಂದಾಗಿ ಪಿಡಿಪಿಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದೇವೆ  ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್  ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲ. ಉಗ್ರವಾದ ಮತ್ತು ಹಿಂಸಾಚಾರ ಮುಂದುವರಿದಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಲಹೆ ಪಡೆದು  ಪಿಡಿಪಿಯೊಂದಿಗೆ ಇರುವ ಮಹಾಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಬಿಜೆಪಿ ಮನವಿ ಮಾಡಿದೆ ಎಂದು ರಾಮ್ ಮಾಧವ್ ಮಾಹಿತಿ ನೀಡಿದ್ದಾರೆ.

ಪಿಡಿಪಿ ಮುಖ್ಯಮಂತ್ರಿ ಸ್ಥಾನ ಹಾಗೂ ಬಿಜೆಪಿ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಂಡಿದ್ದವು. ಆದರೆ, ಇದೀಗ  ಏಕಾಏಕಿ ಜಮ್ಮು-ಕಾಶ್ಮೀರದ ಮೈತ್ರಿ ಸರಕಾರದಿಂದ  ಕೇಂದ್ರದ ಆಡಳಿತಾರೂಢ ಬಿಜೆಪಿ ಹೊರ ಬಂದಿರುವುದು ಅಚ್ಚರಿ ಮೂಡಿಸಿದೆ.  

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...