ರಾಜ್ಯಾದ್ಯಂತ ಜನತಾ ದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ; ಅಧಿಕಾರಿಗಳ ಕಾರ್ಯಕ್ಷಮತೆಗೆ ಮೆಚ್ಚುಗೆ

Source: Vb | By I.G. Bhatkali | Published on 26th September 2023, 11:57 PM | State News |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯ ಹಿನ್ನೆಲೆಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರ ಉತ್ತಮ ಪ್ರತಿಕ್ರಿಯೆ ಮತ್ತು ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ಸಿಕ್ಕಿದ್ದು, ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲೂ ಜನತಾದರ್ಶನ ಯಶಸ್ವಿಯಾಗಿ ನಡೆದಿದೆ.

ರಾಜ್ಯಾದ್ಯಂತ 6,684 ಅಹವಾಲುಗಳು ಸ್ವೀಕೃತಗೊಂಡು 21ಕ್ಕೆ  ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6,663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ.

ಸಿಂಹಪಾಲು: ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಆಗಿವೆ. ಸಂಜೆ 6 ಗಂಟೆಯ ವರೆಗೂ ಸಿಕ್ಕಿರುವ ಅಂಕಿ-ಅಂಶಗಳ ಪ್ರಕಾರ 2,100ಕ್ಕೂ ಹೆಚ್ಚು ಅಹವಾಲುಗಳು ಕಂದಾಯ ಇಲಾಖೆಗೆ ಸೇರಿದ್ದಾಗಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ್ದ ಸಾವಿರಕ್ಕೂ ಅಧಿಕ ಅಹವಾಲುಗಳಾಗಿವೆ. 3ನೇ ಅತಿಹೆಚ್ಚು ಅಹವಾಲುಗಳು ನಗರಾಡಳಿತ ಇಲಾಖೆಗೆ ಸಂಬಂಧಿಸಿದ್ದಾಗಿವೆ ಎಂದು ತಿಳಿಸಲಾಗಿದೆ.

ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎದುರಿಗೆ ಅತಿ ಹೆಚ್ಚು ಸಮಸ್ಯೆಗಳು ಮತ್ತು ಅಹವಾಲುಗಳು ಸಲ್ಲಿಕೆಯಾಗಿವೆ. ಉಳಿದಂತೆ ಜಿಲ್ಲಾಧಿಕಾರಿಗಳ ಮುಂದೆ ಸಲ್ಲಿಕೆಯಾದವುಗಳಾಗಿವೆ. ಜಿಲ್ಲಾ ರಕ್ಷಣಾಧಿಕಾರಿಗಳ ಎದುರಿಗೆ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿದರೆ ಹೆಚ್ಚಿನ ಕಡೆ ಅತಿಕಡಿಮೆ ಅಹವಾಲುಗಳು ಸಲ್ಲಿಕೆ ಆಗಿರುವುದು ಆಶ್ಚರ್ಯದ ಜತೆಗೆ ವಿಶ್ಲೇಷಣೆ ಮಾಡಬೇಕಾದ ಸಂಗತಿಯಾಗಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...