ಹೆಚ್ಚಿನ ಪ್ರಮಾಣದ ಆಕ್ಸಿಜನ್ ಉತ್ಪಾದನೆಗೆ ಜಿಂದಾಲ್‍ಗೆ ಸೂಚನೆ. ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ ಕಾರ್ಯ ಪರಿಶೀಲಿಸಿದ ಸಚಿವ ಜಗದೀಶ್ ಶೆಟ್ಟರ್.

Source: SO News | By Laxmi Tanaya | Published on 8th May 2021, 9:02 PM | State News | Don't Miss |

ಬಳ್ಳಾರಿ : ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್, ಮೂಲಸೌಕರ್ಯ ಅಭಿವೃದ್ಧಿ,ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಜಿಂದಾಲ್ ಕಾರಖಾನೆ ಆವರಣದಲ್ಲಿರುವ ವಿವಿಧ ಘಟಕಗಳಲ್ಲಿ ಆಕ್ಸಿಜನ್ ಉತ್ಪಾದನೆ ಹಾಗೂ ಟ್ಯಾಂಕರ್‍ಗಳಿಗೆ ಆಕ್ಸಿಜನ್ ಭರ್ತಿ ಮಾಡುವ ಪ್ರಕಿಯೆಯನ್ನು ಶನಿವಾರ ಪರಿಶೀಲಿಸಿದರು.

ಆಕ್ಸಿಜನ್ ಉತ್ಪಾದನೆಯ ಮಾಹಿತಿಯನ್ನು ಪಡೆದುಕೊಂಡ ಅವರು ಕೈಗಾರಿಕೆಗೆ ಬಳಸಲಾಗುತ್ತಿರುವ ಆಕ್ಸಿಜನ್ ಪ್ರಮಾಣ ಕಡಿತಗೊಳಿಸಿ ವೈದ್ಯಕೀಯ ಕ್ಷೇತ್ರಕ್ಕೆ ಒದಗಿಸಲು ಸಚಿವ ಜಗದೀಶ ಶೆಟ್ಟರ್ ಅವರು ಸೂಚನೆ ನೀಡಿದರು. ಈಗ ಉತ್ಪಾದಿಸಲಾಗುತ್ತಿರುವ ಆಕ್ಸಿಜನ್ ಪ್ರಮಾಣವನ್ನು 1 ಸಾವಿರದಿಂದ 1200 ಮೆಟ್ರಿಕ್ ಟನ್‍ವರೆಗೆ ಹೆಚ್ಚಿಸಲು ಜಿಂದಾಲ್ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್‍ಗಿಂತ ಮುಂಚೆ ನಿತ್ಯ 350ರಿಂದ 400 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದಿಸಿ ಕೈಗಾರಿಕೆ,ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬಳಸಿಕೊಳ್ಳಲಾಗುತ್ತಿತ್ತು. ಕೋವಿಡ್ ಹಿನ್ನಲೆಯಲ್ಲಿ ಹಂತಹಂತವಾಗಿ ಆಕ್ಸಿಜನ್ ಉತ್ಪಾದನಾ ಪ್ರಮಾಣ ಹೆಚ್ಚಿಸಿ ಸದ್ಯ 900 ಟನ್‍ವರೆಗೆ ನಿತ್ಯ ಆಕ್ಸಿಜನ್ ಉತ್ಪಾದಿಸಲಾಗುತ್ತಿದೆ ಎಂದು ಜಿಂದಾಲ್ ಅಧಿಕಾರಿ ಪ್ರಭು ಅವರು ಸಚಿವರಾದ ಶೆಟ್ಟರ್ ಅವರಿಗೆ ಮಾಹಿತಿ ನೀಡಿದರು.

ರಾಜ್ಯದಲ್ಲಿರುವ ಈಗಿನ ಸೊಂಕಿನ ಲಕ್ಷಣಗಳನ್ನು ಗಮನಿಸಿದರೇ ನಿತ್ಯ 1700 ಮೆಟ್ರಿಕ್ ಟನ್ ಆಕ್ಸಿಜನ್ ಕರ್ನಾಟಕಕ್ಕೆ ಅಗತ್ಯವಿದೆ. ಕೇಂದ್ರ ಸರಕಾರ 1200 ಮೆಟ್ರಿಕ್ ಟನ್ ಆಕ್ಸಿಜನ್ ಹಂಚಿಕೆ ಮಾಡಲು ಒಪ್ಪಿಕೊಂಡಿದ್ದು, ಅಷ್ಟು ಪ್ರಮಾಣದಲ್ಲಿ ರಾಜ್ಯಕ್ಕೆ ಸರಬರಾಜದಲ್ಲಿ ಉತ್ತಮ ರೀತಿಯಿಂದ ನಿರ್ವಹಣೆ ಮಾಡಬಹುದಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಜಿಂದಾಲ್ ಸೇರಿದಂತೆ ರಾಜ್ಯದ ಇತರ ಉದ್ದಿಮೆಗಳಿಗೂ ಆಕ್ಸಿಜನ್ ಉತ್ಪಾದನಾ ಪ್ರಮಾಣ ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ ಮತ್ತು ಭದ್ರವಾತಿ,ರಾಯಚೂರು,ಕೊಪ್ಪಳದಲ್ಲಿ ಸ್ಥಗಿತವಾಗಿರುವ ಆಕ್ಸಿಜನ್ ಉತ್ಪಾದಿಸುವ ಕೈಗಾರಿಕೆಗಳನ್ನು ಪುನಃ ಆರಂಭಿಸಲು ಸೂಚಿಸಲಾಗಿದೆ ಎಂದರು.

ಜಿಂದಾಲ್ ಕಾರ್ಖಾನೆಯು ಪ್ರತಿನಿತ್ಯ 900ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದಿಸುತ್ತಿದ್ದು, ಅದರಲ್ಲಿ  ರಾಜ್ಯಕ್ಕೆ  ಪ್ರತಿನಿತ್ಯ 650 ಮೆಟ್ರಿಕ್ ಟನ್ ಇಲ್ಲಿಂದ ಸರಬರಾಜಾಗುತ್ತಿದೆ ಎಂದು ತಿಳಿಸಿದ ಸಚಿವ ಜಗದೀಶ್ ಶೆಟ್ಟರ್ ಅವರು ಜಿಂದಾಲ್ ಕಾರ್ಖಾನೆ ಸಂಕಷ್ಟದ ಸಮಯದಲ್ಲಿ ಇಡೀ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಮಾಡುವ ಮೂಲಕ ಒಳ್ಳೆಯ ಕೆಲಸ ಮಾಡುತ್ತಿದೆ. ಜಿಂದಾಲ್‍ನ ಇತರೆ  ಸ್ಟೀಲ್ ಉತ್ಪಾದನಾ ಕಾರ್ಯಗಳಿಗೆ ಆಕ್ಸಿಜನ್ ಕಡಿಮೆ ಮಾಡಿ, ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಆಕ್ಸಿಜನ್ ಉತ್ಪಾದನೆ ಮಾಡಿ ನೀಡುವಂತೆ ತಿಳಿಸಲಾಗಿದ್ದು, ಅವರು ಒಪ್ಪಿಕೊಂಡಿದ್ದಾರೆ ಎಂದರು.

ನಮ್ಮ ನಿರೀಕ್ಷೆಗೂ ಮೀರಿ ಕೊರೊನಾ ವೇಗವಾಗಿ ಹರಡುತ್ತಿದೆ.  ಕೋವಿಡ್ ಎರಡನೇ ಅಲೆಯು ಮೊದಲನೆಯ ಅಲೆಗಿಂತ ಎರಡರಿಂದ ಮೂರು ಪಟ್ಟು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ವಿವರಿಸಿದ ಸಚಿವ ಶೆಟ್ಟರ್ ಅವರು ಸರಕಾರ ಜನತಾ ಕಫ್ರ್ಯೂಗಿಂತ ಕಠಿಣವಿರುವ ನಿರ್ಬಂಧಗಳನ್ನು ಜಾರಿಗೆ ತಂದಿದೆ ಎಂದರು.

  ಯಾವುದೇ ಒಂದು ಕಾರ್ಯ ಯಶಸ್ವಿಯಾಗಬೇಕಾದರೆ ಜನರ ಪಾಲ್ಗೊಳ್ಳುವಿಕೆ ತುಂಬಾ ಮುಖ್ಯ. ಸರ್ಕಾರ ಏನೇ ಮಾರ್ಗಸೂಚಿ ಮಾಡಿದ್ರು ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿರುವುದು ಸಾರ್ವಜನಿಕರು. ಜನರು ಕೋವಿಡ್ ಬಗ್ಗೆ ಜಾಗೃತರಾಗಿ ಮನೆಯಿಂದ ಹೊರಗಡೆ ಬರದಂತೆ ಇದ್ದರೆ ಕೊರೋನಾ ಪ್ರಕರಣಗಳನ್ನು ಆದಷ್ಟು ಬೇಗ ಕಡಿಮೆ ಮಾಡಬಹುದು. ಯಾವುದೆ ರೀತಿಯ ರೋಗ ಲಕ್ಷಣಗಳು ಕಂಡ ಬಂದ ಕೂಡಲೇ ನಿರ್ಲಕ್ಷ್ಯವಹಿಸದೆ ಚಿಕಿತ್ಸೆ ಪಡೆದರೆ ಪ್ರಾಥಮಿಕ ಹಂತದಲ್ಲಿಯೇ ಕೋವಿಡ್ ನಿಯಂತ್ರಿಸಬಹುದು ಎಂದು ಅವರು ತಿಳಿಸಿದರು.

ಎಲ್ಲಾ ಕಡೆ  ಹಾಸಿಗೆಗಳು ಭರ್ತಿಯಾಗುತ್ತಿವೆ. ಹಾಸಿಗೆಗಳು ಸಿಗದೆ ಜನರು ಪರದಾಡುತ್ತಿದ್ದಾರೆ. ಆಕ್ಸಿಜನ್ ಪೂರೈಕೆ ಜಾಸ್ತಿಯಾದಂತೆ ಹಾಸಿಗೆಗಳ ಸೃಷ್ಟಿಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜಿಂದಾಲ್ ಸಂಸ್ಥೆಯಲ್ಲಿ ಆರು ಕಂಪನಿಗಳು ಆಕ್ಸಿಜನ್ ಉತ್ಪಾದನೆಯಲ್ಲಿ ತೊಡಗಿಕೊಂಡಿವೆ. ಇದರ ಜೊತೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ  ಕೂಡ ಆಕ್ಸಿಜನ್ ಉತ್ಪಾದಿಸಲಾಗುತ್ತಿದೆ ಇದರಿಂದ ರಾಜಕ್ಕೆ ಆಕ್ಸಿಜನ್ ಪೂರೈಸಲಾಗುತ್ತದೆ. ನಮ್ಮಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಕೇವಲ ನಮ್ಮ ರಾಜ್ಯಕ್ಕೆ ಮಾತ್ರ ಬಳಸಿಕೊಳ್ಳಲು ಅವಕಾಶ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಕೂಡ ಮಾಡಲಾಗಿದೆ. ಇದಕ್ಕೆ  ಕೇಂದ್ರ ಗ್ರೀನ್ ಸಿಗ್ನಲ್ ನೀಡಿದರೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಕಡಿಮೆಯಾಗುತ್ತದೆ ಎಂದರು.

ಒಂದು ಸಾವಿರ ಹಾಸಿಗೆಯಳ್ಳ ಆಸ್ಪತ್ರೆ  ಕೇವಲ ಅವಳಿ ಜಿಲ್ಲೆಗೆ ಮಾತ್ರ ಸೀಮಿತವಾಗದೆ ಸುತ್ತಮುತ್ತಲ ಜಿಲ್ಲೆಗಳ ಜನರಿಗೂ ಇದರ ಅನುಕೂಲವಾಗಲಿದೆ. ಕೋರೋನಾ ತೀವ್ರಗೊಂಡ ರೋಗಿಗಳಿಗೆ ಮಾತ್ರ ಆಕ್ಸಿಜನ್ ಪೂರೈಸಲಾಗುತ್ತದೆ. ಯಾರಿಗೆ ಆಕ್ಸಿಜನ್ ನೀಡಬೇಕು. ಯಾರಿಗೆ ಅವಶ್ಯಕತೆ ಇದೆ ಎನ್ನುವುದು ಜಿಲ್ಲಾಡಳಿತ ತೀರ್ಮಾನಿಸಿ ತೀವ್ರ ಸಂಕಷ್ಟದಲ್ಲಿರುವ ರೋಗಿಗಳಿಗೆ ಆಕ್ಸಿಜನ್ ಮತ್ತು ವೆಂಟಿಲೇಟರ್ ಹಾಸಿಗೆ ನೀಡಲಾಗುತ್ತದೆ ಎಂದು ಅವರು ವಿವರಿಸಿದರು.

ನಂತರ ಜಿಂದಾಲ್‍ನಲ್ಲಿ ಸಚಿವರು,ಶಾಸಕರು,ಸಂಸದರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಶೆಟ್ಟರ್ ಅವರು ಬಳ್ಳಾರಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ,ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಇದಕ್ಕೂ ಮುಂಚೆ ಅವರು ಜಿಂದಾಲ್ ಎದುರುಗಡೆ ನಿರ್ಮಾಣ ಮಾಡಲಾಗುತ್ತಿರುವ 1ಸಾವಿರ ಆಕ್ಸಿಜನ್ ಹಾಸಿಗೆಯುಳ್ಳ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ ಕಾರ್ಯ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ವೈ.ದೇವೇಂದ್ರಪ್ಪ, ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ,ಇ.ತುಕಾರಾಂ,ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಸೇರಿದಂತೆ ಇತರ ಅಧಿಕಾರಿಗಳು ಮತ್ತು ಇತರರು ಇದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...