ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು ಪೊಲೀಸರು ಸೇರಿ ನಾಲ್ವರ ಸಾವು

Source: ANI | By MV Bhatkal | Published on 12th June 2021, 8:04 PM | National News | Don't Miss |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಯನ್ನು ಗುರಿಯಾಗಿಸಿಕೊಂಡು ಉಗ್ರರು  ಶನಿವಾರ ದಾಳಿ ನಡೆಸಿದ್ದು, ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಮೃತಪಟ್ಟಿದ್ಧಾರೆ. ಮೂವರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೊಪೋರದ ಮೇನ್‌ಚೌಕ್‌ ಬಳಿ ಉಗ್ರರು ಸಿಆರ್‌‍ಪಿಎಫ್‌ ಮತ್ತು ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಇಬ್ಬರು ಪೊಲೀಸರು ಮತ್ತು ಇಬ್ಬರು ನಾಗರಿಕರು ಹತರಾಗಿದ್ದಾರೆ. ಒಬ್ಬ ಪೊಲೀಸ್‌ ಸಿಬ್ಬಂದಿ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಅವರು ಹೇಳಿದರು.

 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...