ಹಿಂದಿ ಭಾಷೆ ಕಲಿಕೆಯಿಂದ ಉದ್ಯೋಗ ಸೃಷ್ಠಿ

Source: S.O. News Service | Published on 1st October 2019, 7:46 PM | State News | Don't Miss |

ಧಾರವಾಡ:ಹಿಂದಿ ಭಾಷೆಯ ಕಲಿಕೆಗೆ ಶಿಕ್ಷಣದಲ್ಲಿ ಹೆಚ್ಚಿನ ಮಹತ್ವ ನೀಡಬೇಕಿದೆ. ಇದರಿಂದ ಹೆಚ್ಚಿನ ವಿದ್ಯಾರ್ಥಿಗಳು ಮಾತೃ ಭಾಷೆಯ ಜೊತೆಗೆ ಹಿಂದಿ ಭಾಷೆ ಕಲಿತು, ಕೇಂದ್ರ ಸರಕಾರ ಮತ್ತು ರಾಜ್ಯ, ಹೊರರಾಜ್ಯ ಸೇರಿದಂತೆ ವಿದೇಶದಲ್ಲಿ ಉದ್ಯೋಗ ಪಡೆಯಲು ಸಹಾಯಕವಾಗಲಿದೆ ಎಂದು ಸೋನಿಯಾ ಎಜುಕೇಷನ್ ಟ್ರಸ್ಟಿನ ಅಧ್ಯಕ್ಷ ಡಾ. ಎಚ್.ವಿ. ಡಂಬಳ ಹೇಳಿದರು. 
ಕೇಂದ್ರ ಸರಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮತ್ತು ಸೋನಿಯಾ ಪದವಿ ಪೂರ್ವ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಸಹಯೋಗದಲ್ಲಿ  ಆಯೋಜಿಸಿದ್ದ ಹಿಂದಿ ದಿವಸ್ ಕುರಿತ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದಲ್ಲಿ ಹಿಂದಿಯನ್ನು ಕೇವಲ ಹೆಚ್ಚುವರಿ ಭಾಷೆಯಾಗಿ ಕಲಿಕೆಗೆ ಸೀಮಿತಗೊಳಿಸದೆ, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಹಿಂದಿ  ಕಡ್ಡಾಯಗೊಳಿಸಿಬೇಕು, ಇದರಿಂದ ಮುಂದಿನ ದಿನಗಳಲ್ಲಿ ಎಲ್ಲರೂ ಹಿಂದಿ ಭಾಷೆಯನ್ನು ಅರಿಯಲಿದ್ದಾರೆ ಎಂದರು.
ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಸಹಾಯಕ ಪ್ರಾಧ್ಯಾಪಕ ಡಾ. ರಾಜಕುಮಾರ ಎಸ್ ನಾಯ್ಕ ಮಾತನಾಡಿ,  ರಾಷ್ಟ್ರೀಯ ಭಾವೈಕ್ಯತೆಗೆ ಹಿಂದಿ ಭಾಷೆಯ ಕೊಡುಗೆ ಆಪಾರ. ಆದ್ದರಿಂದ ಎಲ್ಲರೂ ಹಿಂದಿ ಭಾಷೆಯನ್ನು ಕಲಿತರೆ ಸಾಮರಸ್ಯ ಹೆಚ್ಚುತ್ತದೆ ಎಂದು ತಿಳಿಸಿದರು. ಹಿಂದಿ ಭಾಷಾ ಜ್ಞಾನವಿದ್ದರೆ ದೇಶದ ಯಾವುದೇ ಭಾಗದಲ್ಲಾದರೂ ಸುಲಭವಾಗಿ ವ್ಯವಹರಿಸಬಹುದು ಮತ್ತು ಉದ್ಯೋಗ ಲಭಿಸಲಿದೆ ಎಂದರು. ಹಿಂದಿ ಭಾಷೆಯನ್ನು ರಾಷ್ಟ್ರ ಭಾಷೆಯನ್ನಾಗಿ ಜಾರಿಗೆ ತರಬೇಕಾದ ಅಗತ್ಯವಿದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯು ಕನ್ನಡದ ಜೊತೆಗೆ ಹಿಂದಿ ಭಾಷೆಯನ್ನು ಮಾತನಾಡುವುದನ್ನು ಕಲಿತುಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ದೇಶದಲ್ಲಿ ಹಿಂದಿ ಭಾಷೆಯನ್ನು ಬಲವಂತವಾಗಿ ಹೇರಲಾಗುತ್ತಿದೆ ಎಂಬ ಊಹೆಯಿಂದ ಹೊರಬರಬೇಕು ಎಂದು ಮನವಿ ಮಾಡಿದರು. 
ಈ ಸಂದರ್ಭದಲ್ಲಿ ಹಿಂದಿ ಭಾಷೆಯ ಕುರಿತು ಏರ್ಪಡಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಕ್ಷೇತ್ರಿಯ ಜನ ಸಂಪರ್ಕ ಕಾರ್ಯಾಲಯದ ಸಿ. ಕೆ. ಸುರೇಶ, ಸೋನಿಯಾ ಎಜುಕೇಷನ್ ಟ್ರಸ್ಟಿನ  ಕಾರ್ಯದರ್ಶಿ ಎಸ್. ವಿ. ಡಂಬಳ ಉಪಸ್ಥಿತರಿದ್ದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಹಿಂದಿ ಉಪನ್ಯಾಸಕಿ ಪ್ರೊ. ಲತಾ ಪಿ. ಸಣ್ಣಮನಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಪ್ರೊ. ಮಹಮ್ಮದ್‍ಗೌಸ್ ಚಾಂದನವರ ಸ್ವಾಗತಿಸಿದರು. ಪ್ರೊ. ಜಕ್ಕಪ್ಪ ಈಳಗೇರ ವಂದಿಸಿದರು. 

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...