ಲಕ್ನೋ: ಕಪ್ಪನ್ ವಿರುದ್ಧದ ಶಾಂತಿಭಂಗ ಪ್ರಕರಣ ಕೈಬಿಟ್ಟ ನ್ಯಾಯಾಲಯ

Source: VB | By S O News | Published on 17th June 2021, 1:23 PM | National News |

ಲಕ್ನೋ: ಕೇರಳದ ಪತ್ರಕರ್ತ ಸಿದ್ದೀಕ್ ಕಪ್ಪನ್ ಹಾಗೂ ಇತರ ಮೂವರ ವಿರುದ್ಧ ದಾಖಲಾಗಿದ್ದ ಶಾಂತಿಭಂಗ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದ ಮಥುರಾ ನ್ಯಾಯಾಲಯ ಕೈಬಿಟ್ಟಿದೆ ಎಂದು ವರದಿಯಾಗಿದೆ.

ಕಪ್ಪನ್ ಹಾಗೂ ಪಿಎಫ್‌ಐ ಸಂಘಟನೆಯ ಜೊತೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿರುವ ಇತರ ಮೂವರ ವಿರುದ್ಧ ದಾಖಲಿಸಿರುವ ಆರೋಪದ ತನಿಖೆಯನ್ನು ನಿಗದಿತ 6 ತಿಂಗಳೊಳಗೆ ಪೂರ್ಣಗೊಳಿಸಲು ಪೊಲೀಸರು ವಿಫಲರಾಗಿರುವುದರಿಂದ ನ್ಯಾಯಾಲಯ ಈ ಆದೇಶ ನೀಡಿದೆ ಎಂದು ವರದಿ ಹೇಳಿದೆ. ಉತ್ತರಪ್ರದೇಶದ ಹಾಥರಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಯುವತಿಯ ಕುಟುಂಬದವರನ್ನು ಭೇಟಿಯಾಗಲು ತೆರಳುತ್ತಿದ್ದಾಗ ಕಳೆದ ವರ್ಷದ ಅಕ್ಟೋಬರ್ 5ರಂದು ಈ ನಾಲ್ವರನ್ನು ಮಥುರಾ ಪೊಲೀಸರು ಶಾಂತಿಭಂಗಕ್ಕೆ ಪ್ರಯತ್ನಿಸಿದ ಆರೋಪದಲ್ಲಿ ಬಂಧಿಸಿದ್ದರು. ಬಳಿಕ ಇವರ ವಿರುದ್ಧ ದೇಶದ್ರೋಹ, ಭಯೋತ್ಪಾದನಾ ವಿರೋಧಿ ಕಾನೂನು ಹಾಗೂ ಮಾಹಿತಿ ತಂತ್ರಜ್ಞಾನ ಕಾನೂನಿನ ಉಲ್ಲಂಘನೆ ಆರೋಪವನ್ನೂ ದಾಖಲಿಸಿದ್ದು ಈ ಆರೋಪಗಳ ವಿಚಾರಣೆ ಚಾಲ್ತಿಯಲ್ಲಿದೆ ಎಂದು ನ್ಯಾಯಾಲಯದ ಆದೇಶ ಹೇಳಿದೆ.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...