ನರೇಗಾ ಕೂಲಿಕಾರ್ಮಿಕರಿಗೆ ವಿಮಾ ಖಾತ್ರಿ:ಜಿಪಂ ಸಿಇಒ ಕೆ.ಆರ್.ನಂದಿನಿ

Source: SO News | By Laxmi Tanaya | Published on 3rd December 2021, 9:51 PM | State News | Don't Miss |

ಬಳ್ಳಾರಿ : ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶದ ಅಕುಶಲ ಕಾರ್ಮಿಕರನ್ನೂ ಸರ್ಕಾರದ ಯೋಜನೆಯ ಮುಖ್ಯವಾಹಿನಿಗೆ ತರಲು ವಿವಿಧ ವಿಮಾ, ಸೌಲಭ್ಯಗಳಡಿ ಸವಲತ್ತು ಕಲ್ಪಿಸಲು ಮುಂದಾಗಿದೆ. 

ಈ ಹಿನ್ನೆಲೆಯಲ್ಲಿ ವಿವಿಧ ವಿಮಾ ಯೋಜನೆಯಡಿ ಅರ್ಹ ನೊಂದಾಯಿತ ಕೂಲಿ ಕಾರ್ಮಿಕರಿಗೆ ವಿಮಾ ಖಾತ್ರಿ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರದ ನಾನಾ ವಿಮೆ ಮತ್ತು ಆರೋಗ್ಯ ಯೋಜನೆಗಳ ಸೌಲಭ್ಯಗಳಲ್ಲಿ ನೊಂದಣಿ ಮಾಡಿಕೊಳ್ಳಬೇಕು ಎಂದು ಜಿಪಂ ಸಿಇಒ ಕೆ. ಆರ್.ನಂದಿನಿ ಅವರು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ : ಜೀವಕ್ಕಿದೆ ಜೀವ ವಿಮೆ ಎಂಬ ಘೋಷವ್ಯಾಕ್ಯದಡಿ ಈ ಯೋಜನೆಯಲ್ಲಿ ಕೂಲಿ ಕಾರ್ಮಿಕರು ವಾರ್ಷಿಕ ರೂ.330ಗಳ ಕಂತು ಪಾವತಿಸಿ ರೂ.2ಲಕ್ಷ ಜೀವ ವಿಮೆ ಸೌಲಭ್ಯ ಪಡೆಯಬಹುದಾಗಿದೆ. ಗ್ರಾಮೀಣ ಪ್ರದೇಶದ 18ರಿಂದ 50 ವಯೋಮಿತಿಯ ಫಲಾನುಭವಿಗಳಿಗೆ ಈ ಸೌಲಭ್ಯ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ : ಅಪಘಾತ ಸಂದರ್ಭ ಆಪದ್ಬಾಂಧವ ಎಂಬ ಘೋಷವ್ಯಾಕ್ಯದ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ಕೂಲಿ ಕಾರ್ಮಿಕರು  ವಾರ್ಷಿಕ ರೂ.12ಗಳಂತೆ ಕಂತು ಪಾವತಿಸುವ 18ರಿಂದ 70 ವಯೋಮಾನದ      ವ್ಯಕ್ತಿಗಳಿಗೆ ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2 ಲಕ್ಷ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ ರೂ.1ಲಕ್ಷದವೆರೆಗೆ ವಿಮೆ ಸೌಲಭ್ಯ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಮಿಕರು ಸ್ವಯಂ ಆಗಿ ಇ-ಶ್ರಮ್ ಪೋರ್ಟ್‍ನಲ್ಲಿ  ಉಚಿತವಾಗಿ ನೊಂದಾಯಿಸಬಹುದಾಗಿದ್ದು,   ಗುರುತಿನ ಚೀಟಿಯನ್ನು ನೊಂದಾಯಿತ ಸ್ಥಳದಲ್ಲೇ ಪಡೆಯಬಹುದಾಗಿದೆ ಎಂದರು.

ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ   : ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಲ್ಲಿ ನೊಂದಾಯಿತ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಅರ್ಹ ಕುಟುಂಬಗಳಿಗೆ ವಾರ್ಷಿಕ ರೂ.5 ಲಕ್ಷದವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಇದಕ್ಕೆ ಯಾವುದೇ ಕಂತು ಪಾವತಿಸುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಯೋಜನೆಗಳ ಲಾಭ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತಿಯ ಪಿಡಿಓಗಳು, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ಥಳೀಯ ಬ್ಯಾಂಕುಗಳನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...