ನ್ಯಾಯಾಂಗ ನಿಂದನೆ; ಪ್ರಶಾಂತ್‌ ಭೂಷಣ್‌ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

Source: uni | Published on 11th September 2020, 12:16 AM | National News | Don't Miss |

 

ನವದೆಹಲಿ: ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಅ.12ಕ್ಕೆ ಮುಂದೂಡಿದೆ.
ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಅವರ ಮನವಿ ಮೇರೆಗೆ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆಯನ್ನು ಮುಂದೂಡಿದೆ. 
ಈ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಈಗ ಅರುಣ್ ಮಿಶ್ರಾ ನಿವೃತ್ತರಾಗಿದ್ದಾರೆ.
ನಿಯತಕಾಲಿಕೆಗೆ ನೀಡಿದ ಸಂದರ್ಶನದಲ್ಲಿ ಕೆಲ ಹಾಲಿ ಹಾಗೂ ಮಾಜಿ ಉನ್ನತ ನ್ಯಾಯಾಲಯದ ನ್ಯಾಯಾಧೀಶರ ಮೇಲೆ  ಆರೋಪ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ 2009 ರ ನವೆಂಬರ್‌ನಲ್ಲಿ ಅಂದಿನ ತೆಹಲ್ಕಾ ನಿಯತಕಾಲಿಕೆಯ ಪ್ರಧಾನ ಸಂಪಾದಕ  ತರುಣ್ ತೇಜ್‌ಪಾಲ್ ಹಾಗೂ ಪ್ರಶಾಂತ್ ಭೂಷಣ್ ಅವರಿಗೆ ನ್ಯಾಯಾಂಗ ನಿಂದನೆ ನೋಟೀಸ್ ನೀಡಿತ್ತು. 
ಒಬ್ಬ ವ್ಯಕ್ತಿಯು ನ್ಯಾಯಾಂಗದ ವಿರುದ್ಧ ಯಾವಾಗ ಆರೋಪಗಳನ್ನು ಎತ್ತಬಹುದು ಅಥವಾ ಅವನಿಗೆ ಮಾದ್ಯಮಗಳೆದುರು  ಹೋಗಲು ಅನುಮತಿ ಇದೆಯೇ ಎಂಬ ಬಗ್ಗೆ ಸುಪ್ರೀಂ ಕೋರ್ಟ್ಅನೇಕ  ವಿಧದಲ್ಲಿ ಪರಿಶೀಲನೆ ನಡೆಸುತ್ತಿದೆ. ನ್ಯಾಯಾಲಯವು ಈಗ ಅಕ್ಟೋಬರ್ 12 ರಂದು ಮತ್ತೆ ಈ ವಿಷಯವನ್ನು ಕೈಗೆತ್ತಿಕೊಳ್ಳಲಿದೆ

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...