ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

Source: S O News | By I.G. Bhatkali | Published on 23rd March 2024, 10:23 PM | State News |

ಬೆಂಗಳೂರು: ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದಂತೆ ಮಹತ್ತರವಾದ ತೀರ್ಪುಗಳನ್ನು ನೀಡುವ ಮೂಲಕ ನ್ಯಾಯಾಂಗ ತನ್ನ ಹಿರಿಮೆಯನ್ನು ಹೆಚ್ಚಿಸಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಜಿ.ಕೆ.ವಿ.ಕೆಯ ಡಾ: ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ವತಿಯಿಂದ ಹಮ್ಮಿಕೊಳ್ಳಲಾದÀ “ಭವಿಷ್ಯದ ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯ ಮತ್ತು ಉತ್ಕøಷ್ಣತೆ” ವಿಷಯದ ಕುರಿತ 2 ದಿನಗಳ ರಾಜ್ಯಮಟ್ಟದ ನ್ಯಾಯಾಂಗ ಅಧಿಕಾರಿಗಳ 21ನೇ ದೈವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಡಾ: ಬಾಬಾ ಸಾಹೇಬ್ ಅಂಬೇಡ್ಕರ್‍ರವರು ಸಂವಿಧಾನದ 32ನೇ ವಿಧಿಯನ್ನು ‘ಸಂವಿಧಾನದ ಆತ್ಮ’ ಎಂದು ಕರೆದಿದ್ದರು. ಅವರ ಆಶಯದಂತೆ ಸರ್ವೋಚ್ಛ ನ್ಯಾಯಾಲಯ ತನ್ನ ತೀರ್ಪುಗಳ ಮೂಲಕ ಸಮಾನತೆ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯವನ್ನು ಜನರಿಗೆ ಒದಗಿಸಿದೆ ಎಂದರು.

ನ್ಯಾಯ ಉಳ್ಳವರಿಗೆ ಮಾತ್ರವಲ್ಲದೆ ದುರ್ಬಲರಿಗೂ ದೊರೆಯುವಂತಾಗಬೇಕು. ನ್ಯಾಯದಾನ ದುಬಾರಿಯಾಗದೇ ಎಲ್ಲ ವರ್ಗದ ಜನರಿಗೂ ಕೈಗೆಟುವಂತಾಗಬೇಕು. ಸಮಾಜದಲ್ಲಿನ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತಾಗಬೇಕು. ನ್ಯಾಯ ಪಡೆಯುವಿಕೆ ಸೇವೆ/ಸವಲತ್ತಾಗದೇ ಅದೊಂದು ಹಕ್ಕಾಗಬೇಕು ಎಂದರು.

ದಿನೇ ದಿನೇ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆಯಿಂದಾಗಿ ನ್ಯಾಯಾಲಯಗಳ ಮೇಲೆ ಒತ್ತಡ ಜಾಸ್ತಿಯಾಗುತ್ತಿದ್ದು, ಡಿಜಿಟಲೀಕರಣ, ಇ-ಕೋರ್ಟ್, ವರ್ಚುವಲ್ ಕೋರ್ಟ್‍ಗಳಂತಹ ಹೊಸ ಹೊಸ ಪರಿಹಾರಗಳನ್ನು ಬಳಸಿಕೊಳ್ಳುವಂತಾದಲ್ಲಿ, ಸಮಯ ಉಳಿತಾಯದ ಜೊತೆಗೆ ತ್ವರಿತವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಬಹುದಾಗಿದೆ ಎಂದರು. 
ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳಿಗೆ ಹೆಚ್ಚು ಪ್ರಾಶಸ್ತ್ಯ ಕೊಟ್ಟಲ್ಲಿ, ಹೆಚ್ಚು ಜನ ಒಳಗೊಳ್ಳುವುದರ ಜೊತೆಗೆ, ನ್ಯಾಯಾಂಗ ವ್ಯವಸ್ಥೆಯ ವಿಶ್ವಾಸಾರ್ಹತೆ ಇನ್ನಷ್ಟು ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಕೃತಕ ಬುದ್ದಿಮತ್ತೆಯ (Artificial Intelligence) ಬಳಕೆ ಹೆಚ್ಚಾಗಬೇಕು ಎಂದರು. 

ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಧನಂಜಯ ವೈ. ಚಂದ್ರಚೂಡ್, ಜಿಲ್ಲಾ ನ್ಯಾಯಾಲಯಗಳು ಜನರ ಸಂಪರ್ಕದ ಮೊದಲ ಸೇತುವೆಯಾಗಿದೆ. ಇವುಗಳನ್ನು ಬಲವರ್ಧನೆ ಮಾಡುವಲ್ಲಿ ನಾವು ಕೈ ಜೋಡಿಸಬೇಕು. ಗುಜರಾತ್‍ನ ಕಚ್‍ನಲ್ಲಿ ಜಿಲ್ಲಾ ನ್ಯಾಯಾಧೀಶರ ಸಮ್ಮೇಳನ ನಡೆದು ಯಶಸ್ವಿಯಾಯಿತು. ಹಾಗೆಯೇ ನವದೆಹಲಿಯಲ್ಲಿ ಸಹ ಇದೇ ರೀತಿ ಸಮ್ಮೇಳನ ಹಮ್ಮಿಕೊಳ್ಳಲಾಗುವುದು. ಇಂದು ನ್ಯಾಯಾಂಗ ವ್ಯವಸ್ಥೆಯು ಬದಲಾದ ಕಾಲಘಟ್ಟದಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ನ್ಯಾಯಾಂಗ ವೃತ್ತಿಯಲ್ಲಿ ಉತ್ಕøಷ್ಣತೆ, ಕಾರ್ಯಕ್ಷಮತೆ, ಪಾರದರ್ಶಕತೆಯನ್ನು ನ್ಯಾಯಾಧೀಶರು ಅಳವಡಿಸಿಕೊಳ್ಳಬೇಕಾಗುತ್ತದೆ. ಇದರಿಂದ ಸಾಮಾಜಿಕ ರೂಪಾಂತರ ಬರೀ ದೇಶದಲ್ಲಷ್ಟೇ ಅಲ್ಲದೆ, ವಿಶ್ವದಾದ್ಯಂತ ಆಗುತ್ತದೆ. ನ್ಯಾಯಾಲಯದಲ್ಲಿನ ಪ್ರಕರಣಗಳ ವಿಲೇವಾರಿಯಲ್ಲೂ ಸಹ ಕರ್ನಾಟಕ ಮುಂಚೂಣಿಯಲಿದ್ದು, ಲೋಕ್ ಅದಾಲತ್ ಮೂಲಕ ಸಹ ತ್ವರಿತವಾಗಿ ಪ್ರಕರಣಗಳು ಇತ್ಯರ್ಥಗೊಳ್ಳುತ್ತಿವೆ ಎಂದರು. 

ಕರ್ನಾಟಕ ಸರ್ಕಾರ ಇ-ಸೇವಾ ಕೇಂದ್ರ ಸ್ಥಾಪನೆಗೆ 10 ಕೋಟಿ ರೂ. ಗಳನ್ನು ಮಂಜೂರು ಮಾಡಿದೆ. ಇದರಿಂದ ಬಹಳಷ್ಟು ಜನರಿಗೆ ಪ್ರಯೋಜನವಾಗಿದೆ. ಮಹಿಳೆಯರು ನ್ಯಾಯಾಂಗದಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ದೇಶದಲ್ಲಿ ಶೇ 37 ರಷ್ಟು ಮಹಿಳೆಯರು ಹಾಗೂ ಕರ್ನಾಟಕದಲ್ಲಿ ಶೇ 44 ರಷ್ಟು ಮಹಿಳೆಯರು ನ್ಯಾಯಾಂಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಮಹಿಳೆಯರಿಗೆ ಸಮಾನ ಅವಕಾಶಗಳು ಸಿಕ್ಕರೆ ಅವರು ಉತ್ತಮವಾಗಿ ಕೆಲಸ ನಿರ್ವಹಿಸಬಲ್ಲರು. ಅವರಿಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಡಬೇಕಾಗಿದೆ. ನ್ಯಾಯಾಂಗ ಅಧಿಕಾರಿ, ನೌಕರರಿಗೆ ವೇತನ, ನಗದು ರಹಿತ ಚಿಕಿತ್ಸೆ ಮುಂತಾದವುಗಳನ್ನು ಕಲ್ಪಿಸುವುದು ಸಹ ಮುಖ್ಯ ಎಂದರು.

ನ್ಯಾಯಾಧೀಶರು ಯಾವುದಕ್ಕೂ ಭಯಪಡದೆ ಒತ್ತಡಕ್ಕೆ ಒಳಗಾಗದೆ ನಿರ್ಭೀತಿಯಿಂದ ಕೆಲಸ ನಿರ್ವಹಿಸಬೇಕು. ಕಾರ್ಯಭಾರದ ಒತ್ತಡವಿದ್ದಾಗಿಯೂ ಜನರಿಗೆ ನ್ಯಾಯ ಒದಗಿಸುವ ಮೂಲಕ ಸಮಾಜದ ಒಳಿತಿಗೆ ಶ್ರಮಿಸಬೇಕೆಂದರು.

ಕಾರ್ಯಕ್ರಮದಲ್ಲಿ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ಅರವಿಂದ್ ಕುಮಾರ್ ಮಾತನಾಡಿ ಕರ್ನಾಟಕದಲ್ಲಿ ಆಸ್ತಿ ಹಕ್ಕಿಗೆ (ಕೌಟುಂಬಿಕ) ಸಂಬಂಧಿಸಿದಂತೆ, 2021 ರಲ್ಲಿ ಶೇ 92, 2022 ರಲ್ಲಿ ಶೇ 97, 2023 ರಲ್ಲಿ ಶೇ 91.78 ರಷ್ಟು ಪ್ರಕರಣಗಳು ಇತ್ಯರ್ಥಗೊಂಡಿದೆ. ಇದರಲ್ಲಿ ದೇಶದಲ್ಲಿಯೇ ಕರ್ನಾಟಕ ಪ್ರಥಮ ಸ್ಥಾನ ಗಳಿಸಿದೆ. ಲೋಕ್ ಅದಾಲತ್ ಮೂಲಕ ಸಹ ಜನರ ವ್ಯಾಜ್ಯಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ನ್ಯಾಯಾಂಗ ಅಧಿಕಾರಿಗಳು ತಮ್ಮ ಸಹದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಪ್ರಕರಣಗಳ ಬಗ್ಗೆ ಚರ್ಚೆ ನಡೆಸುವುದು ಒಳಿತು. ನ್ಯಾಯಾಂಗ ಅಕಾಡೆಮಿ, ‘ಹೆಲ್ಫ್ ಡೆಸ್ಕ್’ ಸ್ಥಾಪಿಸುವುದು ಮುಖ್ಯ. ಸತತ ಅಧ್ಯಯನ ಮೂಲಕ ನ್ಯಾಯಾಧೀಶರು ನ್ಯಾಯಾಲಯದಲ್ಲಿ ಉತ್ತಮ ತೀರ್ಪುಗಳನ್ನು ನೀಡಬಹುದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾದ  ಬಿ.ವಿ. ನಾಗರತ್ನ, ನ್ಯಾಯಮೂರ್ತಿ ಸೋಮಯ್ಯ ಬೋಪಣ್ಣ, ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಎನ್.ವಿ. ಅಂಜಾರಿಯಾ, ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಹರೀಶ್ ಎ, ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಕೆ. ನವೀನ್ ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...