ಅಂಜುಮನ್ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಜುಕಾಕೋ ಅಬ್ದುಲ್ ರಹೀಂ ನಿಧನ.

Source: S.O. News Service | By MV Bhatkal | Published on 1st March 2021, 7:33 PM | Coastal News | Don't Miss |

ಭಟ್ಕಳ: ಇಲ್ಲಿನ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮುಂದಾಳು ಜುಕಾಕೋ ಅಬ್ದುಲ್ ರಹೀಂ(೮೨) ಅವರು ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಿಧನರಾಗಿದ್ದಾರೆ. ಇವರು ಮಾಜಿ ಸಚಿವ ಜುಕಾಕೊ ಶಂಸುದ್ದೀನ್ ಅವರ ಪುತ್ರ.
ಜುಕಾಕೋ ಅಬ್ದುರ್ರಹೀಂ ಅವರು ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮೃತರು ೨ ಪುತ್ರರು, ೩ ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಇವರು ತಮ್ಮ ಕುಟುಂಬ ಸಮೇತ ಅಮೆರಿಕದಲ್ಲೇ ನೆಲೆಸಿದ್ದರೂ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ೧೯೮೭ರಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡಿದ್ದ ಜುಕಾಕೋ ಅಬ್ದುಲ್ ರಹೀಂ, ೨೦೦೩-೦೭ರ ಅವಧಿಯಲ್ಲಿ ಉಪಾಧ್ಯಕ್ಷರಾಗಿ, ೨೦೦೭-೧೫ರವರೆಗೆ ಪ್ರಧಾನ ಕಾರ್ಯದರ್ಶಿಯಾಗಿ, ೨೦೧೫-೨೦೨೦ರವರೆಗೆ ಅಂಜುಮನ್ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ದುಬೈ ಜಮಾಅತ್ ಪ್ರಧಾನ ಕಾರ್ಯದರ್ಶಿಯಾಗಿ, ಭಟ್ಕಳ ಜಮಾಅತುಲ್ ಮುಸ್ಲಿಮೀನ್ ಹಾಗೂ ಮಜ್ಲಿಸೆ ಇಸ್ಲಾ-ವ-ತಂಝೀಮ್ ಸಂಸ್ಥೆಯಲ್ಲೂ ಇವರು ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.
ಮೃತರ ಅಂತ್ಯಸoಸ್ಕಾರವು ಮಾ.೨ರಂದು ಸಂಜೆ ಲಾಸ್ ಏಂಜಲೀಸ್ ನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...