ಬಾಲಕನ ಹತ್ಯೆ: ಪ್ರೇಯಸಿ ತಾಯಿ ಸೇರಿ ಇಬ್ಬರು ಆರೋಪಿಗಳ ಬಂಧನ

Source: S.O. News Service | By MV Bhatkal | Published on 4th March 2021, 7:47 PM | State News | Don't Miss |

ಕಲಬುರಗಿ:ಜೇವರ್ಗಿ ತಾಲ್ಲೂಕಿನ ನರಿಬೋಳ್ ಗ್ರಾಮದಲ್ಲಿ 14 ವರ್ಷದ ಬಾಲಕನಿಗೆ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿ, ಕೈಕಾಲುಗಳನ್ನು ಕಟ್ಟಿ ಭೀಮಾ ನದಿಯಲ್ಲಿ ಎಸೆದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಬಾಲಕನ ಪ್ರೇಯಸಿಯ ತಾಯಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ತಾರಾ ಬಿ., ಹಾಗೂ ಆಕೆಯ ಪ್ರಿಯಕರ ಮೆಹಬೂಬ್ ಎಂದು ಗುರುತಿಸಲಾಗಿದೆ. ನರಿಬೋಳ್ ಗ್ರಾಮದ 14ರ ಬಾಲಕ ಅದೇ ಗ್ರಾಮದ ತನಗಿಂತ ವಯಸ್ಸಿನಲ್ಲಿ ದೊಡ್ಡವಳಾದ ಆರೋಪಿ ತಾರಾ ಬಿ., ಪುತ್ರಿಯನ್ನು ಪ್ರೀತಿಸುತ್ತಿದ್ದ. ಜೊತೆಗೆ ಆಕೆಗೆ ಹೊಸ ಮೊಬೈಲ್ ಸಹ ಕೊಡಿಸಿದ್ದನಂತೆ. ಆದಾಗ್ಯೂ, ಯುವತಿಯ ತಾಯಿಗೆ ಇದು ಇಷ್ಟವಿರಲಿಲ್ಲ. ಹೀಗಾಗಿ ತನ್ನ ಪರಿಚಯಸ್ಥ ಮೆಹಬೂಬ್ ಎಂಬಾತನಿಗೆ ಹೆದರಿಸಲು ಹೇಳಿದ್ದಳು. ಆತ ಒಂದೆರಡು ಬಾರಿ ಆತನಿಗೆ ಹೆದರಿಸಿದ್ದರೂ ಬಾಲಕ ಮತ್ತು ಯುವತಿ ನಡುವಿನ ಪ್ರೀತಿ ಮುಂದುವರೆದಿತ್ತು.
ಇದರಿಂದ ಕುಪಿತಗೊಂಡ ಮೆಹಬೂಬ್ ಮತ್ತು ಯುವತಿ ತಾಯಿ ತಾರಾ ಬಿ., ಅವರು ಸ್ನೇಹಿತರ ಜೊತೆಗೂಡಿ ಬಾಲಕನಿಗೆ ಬೋಟ್‍ನಲ್ಲಿ ಚಾಮನೂರು ಸೇತುವೆ ಬಳಿ ಕರೆದುಕೊಂಡು ಹೋಗಿ ಕಂಠಪೂರ್ತಿ ಕುಡಿಸಿದ್ದಾರೆ. ನಂತರ ಬಾಲಕನಿಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ಆ ಬಳಿಕ ಬಾಲಕನ ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ಗೋಣಿ ಚೀಲದಲ್ಲಿ ಹಾಕಿ ನರಿಬೋಳ್- ಚಾಮನೂರು ಭೀಮಾ ನದಿಯಲ್ಲಿ ನಿರ್ಮಾಣವಾಗುತ್ತಿರುವ ಸೇತುವೆಯ ಕೆಳಗೆ ಶವ ಎಸೆದು ಪರಾರಿಯಾಗಿದ್ದರು. ಈ ಕುರಿತು ಕಳೆದ ಫೆಬ್ರವರಿ 25ರಂದು ಬಾಲಕನ ಶವವು ಭೀಮಾ ನದಿ ದಡದಲ್ಲಿ ಪತ್ತೆಯಾಗಿತ್ತು.
ಪ್ರಕರಣದ ಬೆನ್ನಟ್ಟಿದ್ದ ಪೋಲಿಸರು, ಬಾಲಕನ ಮೊಬೈಲ್ ಕರೆಗಳ ಸಂಗ್ರಹವನ್ನು ತೆಗೆದಾಗ ಬಾಲಕನ ಪ್ರೀತಿಯ ವಿಷಯ ತಿಳಿದಿದೆ. ಈ ಕುರಿತು ತನಿಖೆ ಕೈಗೊಂಡಾಗ ಆರೋಪಿಗಳ ಸುಳಿವು ಸಿಕ್ಕಿದ್ದು, ತಾರಾ ಬಿ., ಹಾಗೂ ಮೆಹಬೂಬ್ ಅವರಿಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಕೊಲೆಯಾದ ಬಾಲಕ ಏಳನೇ ತರಗತಿಯವರೆಗೆ ಓದಿ ನಂತರ ಊರಲ್ಲೇ ಓಡಾಡಿಕೊಂಡಿದ್ದ ಎನ್ನಲಾಗಿದೆ.

Read These Next

ಕೋವಿಡ್ ನಿಯಂತ್ರಣಕ್ಕೆ ಪ್ರಥಮ ಆದ್ಯತೆ. ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ : ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೋವಿಡ್ ನಿಯಂತ್ರಣದ ಕರ್ತವ್ಯಕ್ಕೆ ಪ್ರಥಮ ಆದ್ಯತೆ ನೀಡಬೇಕು. ...

ಜಿಲ್ಲೆಯ ಮದುವೆ ಹಾಗೂ ಇತರೆ ಸಮಾರಂಭಗಳ ಆಯೋಜನೆಗೆ ಪಾಸ್ ಕಡ್ಡಾಯ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ್

ಧಾರವಾಡ : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅತ್ಯವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ...

ಖಾಸಗಿ ಆಸ್ಪತ್ರೆಗಳು ಶೇ.50 ಹಾಸಿಗೆ ಸರ್ಕಾರಿ ಕೋಟಾ ಮೀಸಲಿಡಬೇಕು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ...

ಧಾರವಾಡ ಮಾರುಕಟ್ಟೆ ಪ್ರದೇಶ, ಜನನಿಬಿಡ ಪ್ರದೇಶಗಳಲ್ಲಿ ಸಂಚರಿಸಿ, ಉಚಿತ ಮಾಸ್ಕ್ ವಿತರಿಸಿ, ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರು.

ಧಾರವಾಡ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದ ಸಾರ್ವಜನಿಕರು ಸುರಕ್ಷಿತವಾಗಿರಲು, ಆರೋಗ್ಯ ...

ಕೋವಿಡ್ ನಿಯಂತ್ರಣಕ್ಕೆ ಪ್ರಥಮ ಆದ್ಯತೆ. ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ : ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೋವಿಡ್ ನಿಯಂತ್ರಣದ ಕರ್ತವ್ಯಕ್ಕೆ ಪ್ರಥಮ ಆದ್ಯತೆ ನೀಡಬೇಕು. ...

ಜಿಲ್ಲೆಯ ಮದುವೆ ಹಾಗೂ ಇತರೆ ಸಮಾರಂಭಗಳ ಆಯೋಜನೆಗೆ ಪಾಸ್ ಕಡ್ಡಾಯ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ್

ಧಾರವಾಡ : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅತ್ಯವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ...