ತಾಲ್ಲೂಕು ಕಚೇರಿಗೆ ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಭೇಟಿ

Source: sonews | By Staff Correspondent | Published on 30th November 2019, 10:23 PM | State News |

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿಗೆ ಶನಿವಾರ ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಿದರು.

ತಾಲ್ಲೂಕು ಕಚೇರಿಗೆ ಸಂಬಂಧಿಸಿದಂತೆ ಪೈಕಿ ಪಹಣಿ ಒಗ್ಗೂಡಿಸುವ ಬಗ್ಗೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಕುಟುಂಬದ ಸದಸ್ಯರ ಜೋಡಣೆ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದರು.

ತಾಲ್ಲೂಕಿನ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ನಿಗದಿತ ಕಾರ್ಯಕ್ರಮಗಳು, ನಿಗದಿತ ಸಮಯದೊಳಗೆ ಮುಗಿಯುವಂತೆ ನೋಡಿಕೊಳ್ಳಬೇಕು. ಕೆಲಸದಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ಮಾಡಿದರು.

ಗೌನಿಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ನೂತನ ನಾಡ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.

ತಹಶೀಲ್ದಾರ್‌ ಕೆ.ಎನ್‌.ಸುಜಾತ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...