ದಕ್ಷಿಣ ಕನ್ನಡದ ವ್ಯಕ್ತಿ ಹಾಸನದ ಅರಕಲಗೂಡಿನಲ್ಲಿ ನಿಗೂಢ ಸಾವು

Source: S.O. News Service | By S O News | Published on 3rd October 2018, 11:01 PM | Coastal News |

ಮಂಗಳೂರು:  ದಕ್ಷಿಣ ಕನ್ನಡದ ಕಡಬದ ವ್ಯಕ್ತಿಯೋರ್ವರು ಹಾಸನದ ಅರಕಲಗೂಡಿನಲ್ಲಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಕಡಬ ತಾಲೂಕು ಬಂಟ್ರ ಗ್ರಾಮದ ಹಳೇಸ್ಟೇಷನ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಅಬ್ದುಲ್ ಅಝೀಝ್ ಎಂದು ಗುರುತಿಸಲಾಗಿದೆ.

ಮೃತರು ಕಳೆದೊಂದು ವಾರದಿಂದ ಅರಕಲಗೂಡು ಪರಿಸರದಲ್ಲಿ ಇದ್ದರೆನ್ನುವ ಮಾಹಿತಿಯಿದ್ದು, ಮಂಗಳವಾರ ರಾತ್ರಿ ಇವರನ್ನು ಕಂಡವರಿದ್ದಾರೆ‌. ಆದರೆ ಬುಧವಾರ ಬೆಳಿಗ್ಗೆ ಬಸ್ ನಿಲ್ದಾಣದ ಬಳಿ ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...