ಕದಂಬೋತ್ಸವ-2020 ಅಂಗವಾಗಿ ಫೆ. 8 ರಂದು ಮ್ಯಾರಾಥಾನ

Source: S O News Service | By Office Staff | Published on 27th January 2020, 8:14 PM | Coastal News |

ಕಾರವಾರ:  ಕದಬೋತ್ಸವ 2020 ಅಂಗವಾಗಿ ಫೆಬ್ರವರಿ 8 ರಂದು ವ್ಯವಸ್ಥಿತವಾದ ಮ್ಯಾರಾಥಾನ ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ ಕೆ. ಅವರು ಸೂಚಿಸಿದರು. 
ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸಿ ಸ್ಥಳಗಳ ಅಭಿವೃದ್ಧಿ ಮತ್ತು ಸಂರಕ್ಷಣಾ ಸಮಿತಿಯ ಕಾರ್ಯಕಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
ಜಿಲ್ಲೆಯ ವಿವಿಧ ಪ್ರವಾಸಿ ಸ್ಥಳಗಳಿಗೆ ದೇಶಿ-ವಿದೇಶಿ ಹಾಗೂ ಸ್ಥಳೀಯ ಪ್ರವಾಸಿಗರನ್ನು ಸೆಳೆಯಲು ವಿವಿಧ ಕಾರ್ಯಕ್ರಮಗ:ಳನ್ನು ಹಮ್ಮಿಕೊಳ್ಳಬೇಕಾಗಿದೆ. ಇದೇ ಫೆಬ್ರವರಿ ಮೊದಲ ವಾರದಲ್ಲಿ ಕದಂಬೋತ್ಸವ ನಡೆಯುತ್ತಿದ್ದು, ಈ ಸುವರ್ಣಾವಕಾಶದಲ್ಲಿ ಫೆಬ್ರವರಿ 8 ರಂದು ವ್ಯವಸ್ಥಿತವಾದ ಮ್ಯಾರಾಥಾನ್ ಹಮ್ಮಿಕೊಳ್ಳುವ ಮೂಲಕ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು  ಜಿಲ್ಲೆ ಮತ್ತು ಬನವಾಸಿಯತ್ತ ಸೆಳೆಯಬಹುದಾಗಿದೆ ಎಂದರು. 
ಅದೇರೀತಿ ಗೋಕರ್ಣದ ಬೀಚ್ ಗಳಲ್ಲಿ ಗಾಳಿಪಟ ಉತ್ಸವ ಮತ್ತು ಭಟ್ಕಳದ ಮುರಡೇಶ್ವರದಲ್ಲಿ ಸ್ಕೂಬಾ ಡೈವಿಂಗ್ ಹಾಗೂ ಕಾರವಾರದ ಕಾಳಿ ರಿವರ್ ಗಾರ್ಡ್‍ನದಲ್ಲಿ ಕೈಯಾಕಿಂಗ್ ಸ್ಪರ್ಧೆ, ಅರಣ್ಯ ಇಲಾಖೆ ಸಹಯೋಗದಲ್ಲಿ ಹಾರ್ನ್‍ಬಿಲ್ ಫೆಸ್ಟಿವಲ್‍ಗಳನ್ನು ಕೂಡ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. 
ಇವುಗಳನ್ನು ಆಯೋಜಿಸುವ ವೇಳಾಪಟ್ಟಿಯನ್ನು ಶೀಘ್ರದಲ್ಲಿ ಸಿದ್ದಪಡಿಸಿ ಯಾವುದೇ ಲೋಪದೋಷಗಳು ಇಲ್ಲದಂತೆ ಹಮ್ಮಿಕೊಳ್ಳುವ ಮೂಲಕ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಿ.ಪಂ.ಮುಖ್ಯಕಾರ್ಯನಿರ್ವಾಹಕಾಧಿಕಾರಿ ಎಂ.ರೋಶನ್, ಅಪರ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಅಧಿಕಾರಿ ಎಸ್.ಪುರುಷೋತ್ತಮ್ ಸೇರಿದಂತೆ ಇತರರು ಹಾಜರಿದ್ದರು.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...