ಕದ್ರಿ ಪಾರ್ಕ್ ರಸ್ತೆ ಕಾಮಗಾರಿ ವಿಳಂಭ. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Source: SO News | By Laxmi Tanaya | Published on 21st September 2020, 4:35 PM | Coastal News |

ಮಂಗಳೂರು : ಕದ್ರಿ ಪಾರ್ಕ್ ರಸ್ತೆ ಕಾಮಗಾರಿ ವಿಳಂಬ ನೀತಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಗರದ ಸರ್ಕ್ಯೂಟ್ ಹೌಸ್ ಬಳಿ ಪ್ರತಿಭಟನೆ ನಡೆಸಿದರು.

ಸ್ಮಾರ್ಟ್ ಸಿಟಿ ಯೋಜನೆಯ ಹೆಸರಿನಲ್ಲಿ ಹಣಪೋಲು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ  ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೋ, ಕದ್ರಿ ಪಾರ್ಕ್ ರಸ್ತೆ ಕಾಮಗಾರಿ ಸಂಪೂರ್ಣವಾಗಿ ವಿಫಲವಾಗಿದೆ. ನಗರ ಪ್ರದೇಶದಲ್ಲಿ ಸಾಕಷ್ಟು ಸ್ಮಾರ್ಟ್ ಸಿಟಿ ಹಣ ಪೋಲು ಮಾಡಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ವಿಚಾರದಲ್ಲಿ ಬಿಜೆಪಿ ಸರ್ಕಾರ ಹಾಗೂ ಸ್ಥಳೀಯ ಶಾಸಕರು ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಮಾಜಿ ಮೇಯರ್ ಮಹಾಬಲ ಮಾರ್ಲ ಮಾತನಾಡಿ, ಸ್ಮಾರ್ಟ್ ಯೋಜನೆ ಭ್ರಷ್ಟಾಚಾರದ ಕೂಪವಾಗಿದೆ.  ಸ್ಮಾರ್ಟ್ ಸಿಟಿ ಯೋಜನೆಯನ್ನು ಪ್ಯಾಕೇಜ್ ಮಾಡುವ ಮೂಲಕ ಹಣವನ್ನು ವ್ಯಯ ಮಾಡಲಾಗುತ್ತಿದೆ ಎಂದು ದೂರಿದರು. 

ಈ ವೇಳೆ ಕಾಂಗ್ರೆಸ್ ಮುಖಂಡರಾದ ಟಿ.ಕೆ.ಸುಧೀರ್, ಸಲೀಂ, ಸೇರಿದಂತೆ ಮತ್ತಿತರು ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...