ಸಂಘದ ನಿಷ್ಠಾವಂತ ಕಾರ್ಯಕರ್ತ ಶಿರಸಿ ಸಿದ್ದಾಪುರ ಕ್ಷೇತ್ರ ಶಾಸಕ ಕಾಗೇರಿಗೆ ಸ್ಪೀಕರ್ ಹುದ್ದೆ

Source: sonews | By Staff Correspondent | Published on 30th July 2019, 3:32 PM | State News | Don't Miss |

ಬೆಂಗಳೂರು: ವಿಧಾನಸಭೆಯ ಸ್ಪೀಕರ್ ಹುದ್ದೆಗೆ ಬಿಜೆಪಿ ಶಾಸಕ ಹಾಗೂ ಸಂಘದ ನಿಷ್ಠಾವಂತ ಕಾರ್ಯಕರ್ತ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಸಿದ್ದು, ಬುಧವಾರ ಸ್ಪೀಕರ್ ಹುದ್ದೆಗೇರುವುದು ಖಚಿತಗೊಂಡಂತಾಗಿದೆ.

ಕಾಗೇರಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

ಸೋಮವಾರ ತನಕ ಸ್ಪೀಕರ್ ಹುದ್ದೆಗೆ ಕೆ.ಜಿ.ಬೋಪಯ್ಯನವರೇ ಬಿಜೆಪಿ ಅಭ್ಯರ್ಥಿ, ಅವರೇ ಆಯ್ಕೆಯಾಗುವುದು ಖಚಿತ ಎನ್ನಲಾಗಿತ್ತು.  ಬೋಪಯ್ಯ ಈ ಹಿಂದೆಯೂ ಬಿಜೆಪಿ ಸರಕಾರದ ಅವಧಿಯಲ್ಲಿ ವಿಧಾನಸಭೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು

ಇದೀಗ ದಿಢೀರನೆ ಬಿಜೆಪಿ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯ ಬದಲಾವಣೆಯಾಗಿದೆ. ಬುಧವಾರ ಬೆಳಗ್ಗೆ 11 ಗಂಟೆಗೆ ಹೊಸ ಸ್ಪೀಕರ್‌ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...