ಶಿರಾದಲ್ಲಿ ಕಮಲ ಅರಳಿತು

Source: sonews | By Staff Correspondent | Published on 10th November 2020, 5:27 PM | State News |

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಸತ್ಯನಾರಾಯಣ ನಿಧನದಿಂದ ತೆರವಾಗಿದ್ದ ಶಾಸಕ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ ಗೌಡ 12 ಸಾವಿರದಷ್ಟು ಮತಗಳ ಅಂತರದಿಂದ ಜಯಿಸಿದ್ದಾರೆ.

ಪ್ರತೀ ಸುತ್ತಿನ ಮತ ಎಣಿಕೆಯಲ್ಲೂ ಜಿದ್ದಾಜಿದ್ದಿನ ಪೈಪೋಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಅಂತಿಮವಾಗಿ 12 ಸಾವಿರದಷ್ಟು ಮತಗಳಿಂದ ಸೋಲೊಪ್ಪಿಕೊಂಡಿದ್ದಾರೆ. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಮಾಜಿ ಸಚಿವ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ 35982 ಮತಗಳನ್ನು ಗಳಿಸಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಅಂತಿಮ ಹಾಗೂ 24ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಾಗ ಬಿಜೆಪಿಯ ರಾಜೇಶ್ ಗೌಡ - 74522 ಮತ, ಕಾಂಗ್ರೆಸ್ ನ ಜಯಚಂದ್ರ - 61573 , ಜೆಡಿಎಸ್ ನ ಅಮ್ಮಾಜಮ್ಮ - 35982 ಮತ ಗಳಿಸಿದ್ದಾರೆ. 500ಕ್ಕೂ ಹೆಚ್ಚಿನ ನೋಟಾ ಚಲಾವಣೆಯಾಗಿವೆ.

ಇದುವರೆಗೆ ಜೆಡಿಎಸ್, ಕಾಂಗ್ರೆಸ್‌ನ ರಾಜಕೀಯ ಮೇಲಾಟಕ್ಕೆ ಸಾಕ್ಷಿಯಾಗುತ್ತಿದ್ದ ಶಿರಾ ಕ್ಷೇತ್ರದಲ್ಲಿ ಅಸ್ತಿತ್ವಕ್ಕೆ ಹೋರಾಡುತ್ತಿದ್ದ ಬಿಜೆಪಿ ಮೊದಲ ಭಾರೀ ಗೆಲುವಿನ ನಗೆ ಬೀರಿದೆ. ಮೊದಲ ಸುತ್ತಿನಿಂದಲೂ ಮುನ್ನಡೆಯನ್ನು ಸಾಧಿಸಿದ್ದ ರಾಜೇಶ್ ಗೌಡ ಅವರು ಕೊನೆಯವರೆಗೂ ಅದನ್ನು ಮುಂದುವರಿಸುವಲ್ಲಿ ಸಫಲರಾದರು. 14 ಮತ್ತು 15ನೇ ಸುತ್ತಿನಲ್ಲಿ ರಾಜೇಶ್‌ರ ಮತಗಳ ಪ್ರಮಾಣದ ಮುನ್ನಡೆಯಲ್ಲಿ ಏಕಾಏಕಿ ಇಳಿಕೆಯಾದರೂ ಮುಂದಿನ ಸುತ್ತುಗಳಲ್ಲಿ ಮುನ್ನಡೆಯನ್ನು ವಿಸ್ತರಿಸುತ್ತಾ ಅಂತಿಮವಾಗಿ ಗೆಲುವಿನ ನಗೆ ಬೀರುವಲ್ಲಿ ಸಫಲರಾದರು.

ಹೊಸಮುಖ ಡಾ.ರಾಜೇಶ್ ಗೌಡ ಅವರ ಗೆಲುವಿನೊಂದಿಗೆ ಬಿಜೆಪಿ ಶಿರಾ ಕ್ಷೇತ್ರವನ್ನು ಇದೇ ಮೊದಲ ಬಾರಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...