ಪೊಲೀಸ್ ದೌರ್ಜನ್ಯ ಆರೋಪ: ಎಪಿಸಿಆರ್ ಸಂಘಟನೆಯಿಂದ ಉಡುಪಿ ಎಸ್ಪಿಗೆ ದೂರು

Source: VB News | Published on 27th July 2020, 1:25 AM | Coastal News | Don't Miss |

 

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡ್ಲೂರು ಜಾಮೀಯ ಮದರಸ ಬಳಿಯ ನಿವಾಸಿ ಬಿ.ಎಚ್. ಅಬ್ದುಲ್ಲಾ(26) ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿ ಪೊಲೀಸ್ ಅಧಿಕಾರಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಆಗ್ರಹಿಸಿ ಉಡುಪಿಯ ಅಸೋಸಿಯೇಶನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಶನಿವಾರ ದೂರು ಸಲ್ಲಿಸಿದೆ.
ಅಬ್ದುಲ್ಲಾ ತನ್ನ ಕುಟುಂಬ ನಿರ್ವಹಣೆಗಾಗಿ ಜು.18ರಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಗುಲ್ವಾಡಿ ನದಿಯ ಮೀನುಗಾರಿಕೆ ನಡೆಸಲು ದೋಣಿಯಲ್ಲಿ ತೆರಳಿದ್ದರು. ಈ ವೇಳೆ ಅಬ್ದುಲ್ಲಾರನ್ನು ತಡೆದು ಪ್ರಶ್ನಿಸಿದ ಗ್ರಾಮಾಂತರ ಠಾಣೆಯ ಉಪನಿರೀಕ್ಷಕ, ಅಬ್ದುಲ್ಲಾರಿಗೆ ಲಾಠಿ ಮತ್ತು ಕಬ್ಬಿಣದ ರಾಡ್‌ನಿಂದ ಹೊಡೆದಿದ್ದಾರೆ ಎಂದು ದೂರಿನಲ್ಲಿ ಸಂಸ್ಥೆಯ ಜಿಲ್ಲಾಧ್ಯಕ್ಷ ಹುಸೇನ್ ಕೊಡಿಬೇಂಗ್ರೆ ಆರೋಪಿಸಿದ್ದಾರೆ.
ಹಲ್ಲೆಯಿಂದ ಅಬ್ದುಲ್ಲಾ ಅವರ ಕಾಲು ಹಾಗೂ ಕೈ ಮೂಳೆಗೆ ತೀವ್ರ ಗಾಯಗಳಾಗಿದೆ. ಈ ಬಗ್ಗೆ ಯಾರಲ್ಲಾದರೂ ದೂರಿದರೆ, ನ್ಯಾಯಾಲಯವನ್ನು ಸಂಪರ್ಕಿಸಿದರೆ ಭೀಕರ ಪರಿಣಾಮವನ್ನು ಎದುರಿಸಬೇಕಾದೀತು ಎಂದು ಉಪನಿರೀಕ್ಷಕರು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಈ ಸಂಬಂಧ ರಾಜ್ಯ ಸರಕಾರದ ಗೃಹ ಕಾರ್ಯದರ್ಶಿಗೆ, ಡಿಜಿಪಿ, ಐಜಿಪಿ, ಹೈಕೋರ್ಟ್ ನ್ಯಾಯಾಮೂರ್ತಿ, ಅಲ್ಪಸಂಖ್ಯಾತರ ಆಯೋಗ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ಹುಸೇನ್ ಕೋಡಿಬೇಂಗ್ರೆ ದೂರು ನೀಡಿದ್ದಾರೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...