ಇನ್ನು ನೆನಪು ಮಾತ್ರ: ನಟ ಪುನೀತ್ ರಾಜ್ ಕುಮಾರ್ ಪಂಚಭೂತಗಳಲ್ಲಿ ಲೀನ

Source: S.O. News Service | By MV Bhatkal | Published on 31st October 2021, 12:05 PM | State News | Don't Miss |


ಬೆಂಗಳೂರು: ಬದುಕಿ ಬೆಳಗಬೇಕಿದ್ದ ವಯಸ್ಸಿನಲ್ಲಿ ಹಠಾತ್ ನಿರ್ಗಮನ ಘೋಷಿಸಿ ಕನ್ನಡ ಕುಲಕೋಟಿ ಜನರನ್ನು ದುಃಖದ ಕಡಲಿನಲ್ಲಿ ಮುಳುಗಿಸಿದ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಭಾನುವಾರ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಯಿತು. ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಹಾಗೂ ಸಾವಿರಾರು ಅಭಿಮಾನಿಗಳು ಪುನೀತ್'ಗೆ ಕಣ್ಣೀರ ವಿದಾಯ ಹೇಳಿದರು.

 


ಮೂರು ವರ್ಷದ ಹಿಂದೆಯಷ್ಟೇ ಗೋವಿಂದ ನಾಮ ಸ್ಮರಣೆಯೊಂದಿಗೆ ದಾಸಯ್ಯನ ಪದ್ಧತಿಯಂತೆ ಪುನೀತ್ ರಾಜ್ ಕುಮಾರ್ ಅವರು ತಮ್ಮ ತಾಯಿಯ ಅಂತ್ಯ ಸಂಸ್ಕಾರ ನಡೆಸಿದ್ದರು. ಹಠಾತ್ ಹೃದಯ ಸ್ತಂಭನದಿಂದ ಅಕಾಲಿಕ ನಿಧನ ಹೊಂದಿರುವ ಪುನೀತ್ ಅವರು ತಂದೆ, ತಾಯಿ ಪಕ್ಕದಲ್ಲೇ ಇದೀಗ ಚಿರಸ್ಥಾಯಿಯಾಗಿದ್ದಾರೆ.


ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪುನೀತ್​ ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ, ಸಹೋದರರಾದ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.

ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಡಿಕೆ ಶಿವ​ಕುಮಾರ್​, ಮುನಿರತ್ನ, ರಾಕ್​​ಲೈಕ್​ ವೆಂಕಟೇಶ್​, ಕಿಚ್ಚ ಸುದೀಪ್​, ರವಿಚಂದ್ರನ್​ ಮುಂತಾದವರು ಸ್ಥಳದಲ್ಲಿದ್ದು, ಪುನೀತ್​ಗೆ ಅಂತಿಮ ವಿಧಾಯ ಹೇಳಿದ್ದಾರೆ. ಡಾ. ರಾಜ್​ಕುಮಾರ್​ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್​ಕುಮಾರ್​ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್​ ರಾಜ್​ಕುಮಾರ್​​ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಮುಂಭಾಗ ಜಮಾಯಿಸಿದ್ದರು.

ಇದಕ್ಕೂ ಮುನ್ನ ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಂಠೀರವ ಸ್ಟೇಡಿಯಂನಿಂದ ಪುನೀತ್​ ರಾಜ್​ಕಮಾರ್​ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್​ ಹಣೆಗೆ ಮುತ್ತಿಟ್ಟು ಕಂಬನಿ ಮಿಡಿದರು.

Read These Next

ಹಿಂದೂ ರಾಷ್ಟ್ರ ಮಾಡುತ್ತೇವೆ ಎನ್ನುವವರು ಮೊದಲು ಹಿಂದೂರಾಷ್ಟ್ರದ ಪರಿಕಲ್ಪನೆ ಪ್ರಸ್ತುತಪಡಿಸಲಿ: ಡಾ.ಖಾಸೀಂ

ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದಾಗಿ ಹೇಳಿಕೊಳ್ಳುತ್ತಿರುವವರು ಮೊದಲು ಹಿಂದೂ ರಾಷ್ಟ್ರದ ಪರಿಕಲ್ಪನೆಯನ್ನು ಜನರ ಮುಂದಿಡಲಿ. ...

ಅಕ್ರಮ ಹಣ ವರ್ಗಾವಣೆ ಪ್ರಕರಣ; ಡಿಕೆಶಿ ವಿರುದ್ಧ ಈ.ಡಿ. ಚಾರ್ಜ್‌ಶೀಟ್ ಸಲ್ಲಿಕೆ; ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ; ಡಿಕೆಶಿ ಆರೋಪ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ಹೊರಗಿರುವ ಕೆಪಿಸಿಸಿ ಅಧ್ಯಕ್ಷ ...

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರದ್ದುಗೊಳಿಸಿ ಸಾಹಿತಿ, ಚಿಂತಕರು, ಶಿಕ್ಷಣ ತಜ್ಞರ ಸಭೆ: ಒಕ್ಕೊರಲಿನ ಕೂಗು

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ರದ್ದುಗೊಳಿಸಿ, ಈ ...

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್ ಭೇಟಿ:ಪರಿಶೀಲನೆ

ಬಳ್ಳಾರಿ : ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿರುವ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ...

ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ : ಉಸ್ತುವಾರಿ ಸಚಿವ ಎಸ್.ಅಂಗಾರ

ಉಡುಪಿ : ಮಳೆಗಾಲದ ಸಂದರ್ಭದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಲೋಕೋಪಯೋಗಿ ರಸ್ತೆ, ಜಿಲ್ಲಾ ಪಂಚಾಯತ್ ರಸ್ತೆ, ...