ಕಾನ್ಪುರ್ ಎನ್ ಕೌಂಟರ್: ಮೂವರು ಪೊಲೀಸರ ಅಮಾನತು, ವಿಕಾಸ್ ದುಬೆ ಬಗ್ಗೆ ಸುಳಿವು ಕೊಟ್ಟರೆ 2.5 ಲಕ್ಷ ಬಹುಮಾನ

Source: PTI | Published on 7th July 2020, 12:17 AM | National News | Don't Miss |

 

ಕಾನ್ಪುರ್: ಉತ್ತರ ಪ್ರದೇಶದ 8 ಪೊಲೀಸರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಮೇಲೆ ಇಬ್ಬರು ಸಬ್ ಇನ್ಸ್ ಪೆಕ್ಟರ್ ಹಾಗೂ ಓರ್ವ ಪೊಲೀಸ್ ಪೇದೆ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಚೌಬೆಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಕುನ್ವರ್‌ಪಾಲ್ ಮತ್ತು ಕೃಷ್ಣ ಕುಮಾರ್ ಶರ್ಮಾ ಹಾಗೂ ಕಾನ್‌ಸ್ಟೆಬಲ್ ರಾಜೀವ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಪ್ರಾಥಮಿಕ ವಿಚಾರಣೆ ಪ್ರಾರಂಭಿಸಲಾಗಿದೆ ಎಂದು ಕಾನ್ಪುರ ಎಸ್‌ಎಸ್‌ಪಿ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.
ಎಂಟು ಪೊಲೀಸ್ ಸಿಬ್ಬಂದಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೂವರು ಕರ್ತವ್ಯಲೋಪ ಎಸಗಿದ್ದು, ಅವರ ವಿರುದ್ಧ ಎಫ್ಐಆರ್ ಸಹ ದಾಖಲಿಸಲಾಗಿದೆ ಎಂದು ಪೊಲೀಸ್ ಪಿಆರ್ ತಿಳಿಸಿದ್ದಾರೆ.
ಇನ್ನು ಎಂಟು ಪೊಲೀಸರನ್ನು ಹತ್ಯೆ ಮಾಡಿದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಬಗ್ಗೆ ಸುಳಿವು ಕೊಟ್ಟರೆ 2.5 ಲಕ್ಷ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಸರ್ಕಾರ ಘೋಷಣೆ ಮಾಡಿದೆ. 
ಉತ್ತರ ಪ್ರದೇಶ ಪೊಲೀಸರು ಭಾನುವಾರ ವಿಕಾಸ್ ದುಬೆ ಬಗ್ಗೆ ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದರು. ಸೋಮವಾರ ಇದನ್ನು 2.5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ವಿಕಾಸ್ ದುಬೆಗಾಗಿ ಪೊಲೀಸರು ಸಹ ಹುಡುಕಾಟ ಮುಂದುವರೆಸಿದ್ದಾರೆ

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...