ಕರ್ನಾಟಕ: ಪೊಲೀಸ್ ಇಲಾಖೆಗೆ ಸರ್ಜರಿ; 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದ.ಕ. ರಿಷ್ಯಂತ್

Source: Vb | By I.G. Bhatkali | Published on 21st June 2023, 11:04 AM | State News |

ಬೆಂಗಳೂರು: ರಾಜ್ಯ ಸರಕಾರವು ಪೊಲೀಸ್ ಇಲಾಖೆಗೆ ಸರ್ಜರಿ ಮಾಡಿದ್ದು, 15 ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಸಿ.ಬಿ.ರಿಷ್ಯಂತ್‌ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಬೆಂಗಳೂರು ಮೆಟ್ರೋಪಾಲಿಟಿನ್ ಕಾರ್ಯಪಡೆಯ ಎಡಿಜಿಪಿ ಡಾ.ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಪೊಲೀಸ್‌ ವಸತಿ ನಿಗಮದ ಎಡಿಜಿಪಿ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ, ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರನ್ನು ಬಂದೀಖಾನೆಯ ಎಡಿಜಿಪಿಯಾಗಿ, ರಾಜ್ಯ ಪೊಲೀಸ್ ವಸತಿ ನಿಗಮದ ಎಡಿಜಿಪಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಅರುಣ್ ಚಕ್ರವರ್ತಿ ಜೆ. ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಬಂದೀಖಾನೆಯ ಎಡಿಜಿಪಿ ಮನೀಷ್ ಕರ್ಬಿಕರ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳು ವಿಭಾಗದ ಎಡಿಜಿಪಿಯಾಗಿ, ಬೆಂಗಳೂರು ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ, ಆಂತರಿಕ ಭದ್ರತಾ ವಿಭಾಗದ ಐಜಿಪಿ ವಿಪುಲ್ ಕುಮಾರ್‌ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಮೈಸೂರು ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರನ್ನು ಸಿಐಡಿ ವಿಭಾಗದ ಐಜಿಪಿ ಯಾಗಿ, ಬೆಳಗಾವಿ ಉತ್ತರ ವಲಯ ಐಜಿಪಿ ಎನ್. ಸತೀಶ್ ಕುಮಾರ್‌ ಅವರನ್ನು ಬೆಂಗಳೂರು ನಗರ ಪಶ್ಚಿಮ ವಿಭಾಗದ ಐಜಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಪಶ್ಚಿಮ ವಿಭಾಗದ ಐಜಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರನ್ನು ರಾಜ್ಯ ಮೀಸಲು ಪೊಲೀಸ್ ಪಡೆಯ ಐಜಿಪಿ ಯಾಗಿ, ಎಂ.ಎಸ್.ಐ.ಎಲ್.ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಹುಬ್ಬಳ್ಳಿ-ಧಾರವಾಡ ನಗರದ ಐಜಿಪಿ ಹಾಗೂ ಪೊಲೀಸ್ ಆಯುಕ್ತ ರಮಣ್ ಗುಪ್ತ ಅವರನ್ನು ಬೆಳಗಾವಿ ಯ ಉತ್ತರ ವಲಯ ಐಜಿಪಿಯಾಗಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎಸ್‌.ಎನ್.ಸಿದ್ದರಾಮಪ್ಪ ಅವರನ್ನು ಬೆಂಗಳೂರಿನಲ್ಲಿರುವ ಪೊಲೀಸ್ ಕೇಂದ್ರ ಕಚೇರಿಯ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಳಗಾವಿ ನಗರದ ಡಿಐಜಿ ಹಾಗೂ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರನ್ನು ಮೈಸೂರಿನ ದಕ್ಷಿಣ ವಲಯ ಡಿಐಜಿಪಿಯಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಸಿ.ವಂಶಿಕೃಷ್ಣ ಅವರನ್ನು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡಿಐಜಿಪಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...