ದ್ವಿತೀಯ ಪಿಯು: ಎಲ್ಲ ವಿದ್ಯಾರ್ಥಿಗಳು ತೇರ್ಗಡೆ; 12,239 ಮಂದಿಗೆ 600ಕ್ಕೆ 600 ಅಂಕ

Source: VB News | By I.G. Bhatkali | Published on 21st July 2021, 6:29 PM | State News |

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 6,66,497 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ. ಅದರಲ್ಲಿ ದಕ್ಷಿಣಕನ್ನಡದ 445 ವಿದ್ಯಾರ್ಥಿಗಳು ಸೇರಿ ರಾಜ್ಯಾದ್ಯಂತ 2,239 ಮಂದಿಗೆ 600 ಕ್ಕೆ 600  ಅಂಕಗಳನ್ನು ಪಡೆದಿದ್ದಾರೆಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಜ್ಞರ ಸಮಿತಿ ನೀಡಿದ

ಫಲಿತಾಂಶ ಒಪದವರಿಗೆ ಆಗಸ್ಟ್ 19ರಿಂದ ಪರೀಕ್ಷೆ

ಮಂಗಳವಾರ ಪ್ರಕಟಿಸಿರುವ ದ್ವಿತೀಯ ಪಿಯು ಫಲಿತಾಂಶವನ್ನು ಒಪ್ಪಿಕೊಳ್ಳಲು ಇಲ್ಲವೇ ತಿರಸ್ಕರಿಸಲು ಈ ಬಾರಿಯ ಪರೀಕ್ಷೆಗೆ ನೋಂದಾಯಿಸಿದ್ದ ಹೊಸ ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆ.19ರಿಂದ ಸೆಪ್ಟೆಂಬರ್ 3ರವರೆಗೆ ನಡೆಯುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಕೂರಬಹುದಾಗಿದೆ. ಜು.30ರೊಳಗೆ ಪರೀಕ್ಷೆಗೆ ನೋಂದಾಯಿಸಿಕೊಳ್ಳಬೇಕು. ಖಾಸಗಿ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ನೋಂದಾಯಿಸಿಕೊಂಡಿರುವುದರಿಂದ ಅವರು ಮತ್ತೆ ಪರೀಕ್ಷೆಗೆ ನೋಂದಾಯಿಸಬೇಕಾದ ಅಗತ್ಯವಿಲ್ಲ.

ಸುರೇಶ್‌ಕುಮಾರ್‌, ಶಿಕ್ಷಣ ಸಚಿವ

ಶಿಫಾರಸಿನ ಆಧಾರದಲ್ಲಿ ಎಸೆಸೆಲ್ಸಿಯಲ್ಲಿ ಶೇ.45 ವಿಷಯವಾರು ಅಂಕ, ಪ್ರಥಮ ಪಿಯುಸಿ ಪರೀಕ್ಷೆಯ ಶೇ.45 ವಿಷಯವಾರು ಅಂಕ ಹಾಗೂ ದ್ವಿತೀಯ ಪಿಯುಸಿಯ ವಿದ್ಯಾರ್ಥಿ ಶೈಕ್ಷಣಿಕ ಚಟುವಟಿಕೆಗೆ ಶೇ.10 ಹಾಗೂ ಪ್ರಥಮ್ ಪಿಯುಸಿ ಯಲ್ಲಿ ಪಡೆದ ಅಂಕಗಳಿಗೆ ಶೇ.5 ಕೃಪಾಂಕವನ್ನು ಸೇರಿಸಿ ದ್ವಿತೀಯ ಪಿಯು ವಿದ್ಯಾರ್ಥಿಗಳು ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು.

ಒಟ್ಟು 6,66,497 ವಿದ್ಯಾರ್ಥಿಗಳಲ್ಲಿ 4,50,706 ವಿದ್ಯಾರ್ಥಿಗಳು ಮೊದಲ ಶ್ರೇಣಿ ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದರೆ 1,47,055 , ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 68,729 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

2020-21ನೇ ಸಾಲಿನಲ್ಲಿ 76,344 ಪುನರಾವರ್ತಿತ ವಿದ್ಯಾರ್ಥಿಗಳು ನೆ೦ದಾಯಿಸಿ ಕೊ೦ಡಿದ್ದು, ಅವರೆಲ್ಲರನ್ನು ಕನಿಷ್ಠ ಅಂಕಗಳು ಹಾಗೂ ಶೇ.5ಕೃಪಾಂಕವನ್ನು ನೀಡಿ ಉತ್ತೀರ್ಣಗೊಳಿಸಲಾಗಿದೆ ಎಂದು ಅವರು ತಿಳಿಸಿದರು. 

ಈ ಬಾರಿಯ ದ್ವಿತೀಯ ಪಿಯುಸಿ ತರಗತಿಗಳಿಗೆ ನೋಂದಾಯಿಸಿದ್ದರು ಪಿಯುಸಿ ಪರೀಕ್ಷೆಗೆ ನೋಂದಾಯಿಸದೇ ಇದ್ದ 762 ಮಕ್ಕಳು ಆಗಸ್ಟ್ ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡು ಹಾಜರಾಗಬಹುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಮತ್ತು ಪಿಯು ಇಲಾಖೆಯ ನಿರ್ದೇಶಕಿ ಆರ್. ಸ್ನೇಹಲ್ ಭಾಗವಹಿಸಿದ್ದರು.

600ಕ್ಕೆ 600 ಅಂಕ ಪಡೆದ ಜಿಲ್ಲೆಗಳು: ದಕ್ಷಿಣ ಕನ್ನಡ ಜಿಲ್ಲೆಯ 445, ಬೆಂಗಳೂರು ದಕ್ಷಿಣ ೩೦೨, ಬೆಂಗಳೂರು ಉತ್ತರ ೨೬೧, ಉಡುಪಿ ೧೪೯ ಮಕ್ಕಳು ಪೂರ್ಣ ಅಂಕಗಳನ್ನು ಗಳಿಸಿದ್ದಾರೆ

ಒಟ್ಟು ವಿದ್ಯಾರ್ಥಿಗಳು 6,66,497, ಬಾಲಕರು-3,35,138, ಬಾಲಕಿಯರು-3,31,359, ಹೊಸ ವಿದ್ಯಾರ್ಥಿಗಳು-5,90,153, ಪುನರಾವರ್ತಿತ ವಿದ್ಯಾರ್ಥಿಗಳು-76,344. ವಾಣಿಜ್ಯ ವಿಭಾಗ-2,51,686, ವಿಜ್ಞಾನ ವಿಭಾಗ-2,19,777, ಕಲಾ ವಿಭಾಗ-1,95,034 ವಿದ್ಯಾರ್ಥಿಗಳಿದ್ದಾರೆ.

1,428 ವಿಕಲಚೇತನ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅದರಲ್ಲಿ 84 ಮಂದಿ ಉನ್ನತ ಶ್ರೇಣಿ, 603 ಪ್ರಥಮ ಶ್ರೇಣಿ, 459 ಮಂದಿ ದ್ವಿತೀಯ ಶ್ರೇಣಿ ಮತ್ತು 310 ಮಂದಿ ಉತ್ತೀರ್ಣರಾಗಿದ್ದಾರೆ.

ಈ ಬಾರಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿರುವ ಹಿನ್ನೆಲೆಯಲ್ಲಿ ಅವರೆಲ್ಲರಿಗೂ ಪದವಿ ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಲು ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಲ್ಲಿ ಹೆಚ್ಚಿನ ಸೀಟುಗಳಿಗೆ ಅವಕಾಶ ಕಲ್ಪಿಸಲಾಗಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...