ಕರ್ನಾಟಕ ಬಂದ್ : ನಾಳೆ ಏನಿಲ್ಲ? ಏನಿರುತ್ತೆ ??

Source: SO News | By Laxmi Tanaya | Published on 27th September 2020, 6:37 PM | State News | Don't Miss |

ಬೆಂಗಳೂರು :  ಸೆಪ್ಟೆಂಬರ್ 28ರಂದು ರೈತ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದರಿಂದ  ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಅಸ್ತವಸ್ಥವಾಗುವ ಸಾಧ್ಯತೆಯಿದೆ. ರೈತ ಸಂಘಟನೆಗಳು, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ, ರೈತ ಕೃಷಿ ಕಾರ್ಮಿಕರ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಗಳು ಸೇರಿದಂತೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ  ಬೆಂಬಲ ನೀಡಿವೆ. 

ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6ಗಂಟೆವರೆಗೂ ಕರ್ನಾಟಕ ಸಂಪೂರ್ಣ ಬಂದ್ ಆಗಲಿದೆ ಎಂದು  ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. 

ಕರ್ನಾಟಕ ಬಂದ್ ಆದರೆ ಏನಿರುತ್ತೆ?
ಹಾಲು, ಪೇಪರ್, ಹಣ್ಣು, ತರಕಾರಿ ಎಂದಿನಂತೆ ಇರಲಿದೆ. ಆಸ್ಪತ್ರೆ, ಮೆಡಿಕಲ್ ಸೇವೆಗಳಿಗೆ ಯಾವುದೇ ತೊಂದರೆಯಾಗಲ್ಲ.  ಪೆಟ್ರೋಲ್ ಬಂಕ್ ಓಪನ್ ಇರಲಿದೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಮೆಟ್ರೋ, ವಿಮಾನ, ರೈಲು ಸಂಚಾರ ಬಂದ್ ಆಗಲ್ಲ. ರಾಜ್ಯ ಸರ್ಕಾರಿ ಸಾರಿಗೆ ನೌಕರರ ಸಂಘ ನೈತಿಕ ಬೆಂಬಲವನ್ನಷ್ಟೇ ನೀಡಿದ್ದು, ಎಂದಿನಂತೆ ಬಸ್ ಸಂಚಾರ ಇರಲಿದೆ. . ಹೋಟೆಲ್ ಮಾಲೀಕರು ಸಹ ನೈತಿಕ ಬೆಂಬಲ ನೀಡಿದ್ದು, ಶುಕ್ರವಾರ ಹೋಟೆಲ್ ಗಳು ಇರಲಿದೆ.

ಬಂದ್‌ ಆದರೆ ಇವ್ಯಾವುದು ಇರಲ್ಲ
ಬಹುತೇಕ ಜಿಲ್ಲೆಗಳಲ್ಲಿ ನಾಳೆ ಆಟೋ-ಟ್ಯಾಕ್ಸಿಗಳು ಸಹ ಇರೋದು ಅನುಮಾನ. ಖಾಸಗಿ ಬಸ್ ಸೇವೆ ನಾಳೆ ಬಂದ್ ಆಗುವ ಸಾಧ್ಯತೆ ಹೆಚ್ಚು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...