ಕರ್ನಾಟಕ ಬಂದ್; ಕಾವೇರಿ ತವರಿನಲ್ಲಿ ನೀರಸ ಪ್ರತಿಕ್ರಿಯೆ; ದಕ್ಷಿಣಕನ್ನಡ, ಉತ್ತರ ಕನ್ನಡ, ಕಲ್ಯಾಣ ಕರ್ನಾಟಕ ಭಾಗಕ್ಕೂ ತಟ್ಟದ ಬಂದ್ ಬಿಸಿ

Source: Vb | By I.G. Bhatkali | Published on 30th September 2023, 9:09 AM | Coastal News | State News |

ಬೆಂಗಳೂರು: ಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಪ್ರತಿಭಟಿಸಿ ಕನ್ನಡ ಪರ ಹಾಗೂ ರೈತ ಸಂಘಟನೆಗಳು ಕರ್ನಾಟಕ ಬಂದ್ ಆಚರಣೆಗೆ ಕರೆ ನೀಡಿದ್ದರೂ, ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯಲ್ಲಿ ಮಾತ್ರ ಬಂದ್ ವಾತಾವರಣ ಇಲ್ಲವಾಗಿತ್ತು. ಇಡೀ ಜಿಲ್ಲೆಯಲ್ಲಿ ಜನಜೀವನ ಸಹಜವಾಗಿತ್ತು. ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಶಾಲಾ, ಕಾಲೇಜುಗಳಿಗೆ ರಜೆ ಇರಲಿಲ್ಲ. ಸಂಚಾರ ವ್ಯವಸ್ಥೆಯಲ್ಲಿಯೂ ಯಾವುದೇ ವ್ಯತ್ಯಯವಾಗಿರಲಿಲ್ಲ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲೂ ಬಂದ್‌ಗೆ ನೀರಸ ಪ್ರತಿಕ್ರಿಯೆಯಿತ್ತು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಹಾಗೂ ಚಿಕ್ಕೋಡಿಯಲ್ಲಿ ಬಂದ್ ಕೇವಲ ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆಗೆ ಸೀಮಿತವಾಗಿತ್ತು.

ಬಹುತೇಕ ಕಡೆಗಳಲ್ಲಿ ಕಾವೇರಿ ಹೋರಾಟ ಹತ್ತಿಕ್ಕಲು ಪೊಲೀಸರು ಯತ್ನಿಸಿದ್ದಾರೆ ಎಂದು ಹೋರಾಟಗಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆಯ ಕೇಂದ್ರ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಪೊಲೀಸರೇ ಬಂದ್ ಮಾಡಿದ್ದರು.ಆಯಾ ಜಿಲ್ಲಾ ಕೇಂದ್ರಗಳಲ್ಲಿನ ವೃತ್ತದ ಕಡೆಗೆ ನಾಲ್ಕು ದಿಕ್ಕಿನಲ್ಲೂ ಯಾವುದೇ ವಾಹನ ಸಂಚಾರ ಮಾಡದಂತೆ ಕಾವೇರಿ ಹೋರಾಟ ಹತ್ತಿಕ್ಕಲು ಪೊಲೀಸರು ಯತ್ನಿಸಿದ್ದಾರೆ ಎಂದು ಹೋರಾಟಗಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರ್‌ ಕ್ರಮ ಕಾವೇರಿ ಹೋರಾಟಗಾರರನ್ನು ರೊಚ್ಚಿಗೆಬ್ಬಿಸಿತು. ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಪೊಲೀಸರ ರಸ್ತೆ ಬಂದ್ ಮಾಡಿದ್ದಲ್ಲದೆ,  ಉದ್ದೇಶಪೂರ್ವಕವಾಗಿ ನೂರಾರು ಹೋರಾಟಗಾರರನ್ನು ಬಂಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...